

ಚಿಕ್ಕಮಗಳೂರು: ಆರೋಗ್ಯದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಶೀಘ್ರ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿ ಜೆಡಿಎಸ್ ಮುಖಂಡರು ಗಣಪತಿ ದೇವಸ್ಥಾನದಲ್ಲಿ ಶುಕ್ರವಾರ ಪೂಜೆ ಸಲ್ಲಿಸಿದರು.
ಮುಖಂಡ ಹೊಲದಗದ್ದೆ ಗಿರೀಶ್ ಮಾತನಾಡಿ, ಕುಮಾರಸ್ವಾಮಿ ಅವರು ಬೇಗ ಗುಣಮುಖರಾಗಿ ರಾಜ್ಯದ ಜನರ ಸಂಕಷ್ಟಗಳಿಗೆ ಸ್ಪಂದಿಸುವಂತಾಗಲಿ ಎಂದು ದೇವರಲ್ಲಿ ಪ್ರಾರ್ಥಿಸಲಾಗಿದೆ ಎಂದರು. ಕೆಲವು ಕಾರಣಕ್ಕೆ ಪಕ್ಷಕ್ಕೆ ರಾಜೀನಾಮೆ ನೀಡಿದ್ದರೂ ಎಚ್.ಡಿ.ಕುಮಾರಸ್ವಾಮಿ ಅವರ ಬಗ್ಗೆ ವೈಯಕ್ತಿಕವಾಗಿ ಗೌರವವಿದೆ. ಅವರಿಂದ ನಾಡಿಗೆ ಇನ್ನೂ ಉತ್ತಮ ಸೇವೆ ದೊರೆಯಬೇಕಿದೆ. ಮುಖ್ಯಮಂತ್ರಿಯಾದಾಗ ರಾಜ್ಯಕ್ಕೆ ನೀಡಿದ ಕೊಡುಗೆಗಳನ್ನು ಜನತೆ ಇನ್ನೂ ಮರೆತಿಲ್ಲ ಎಂದರು.
ಜೆಡಿಎಸ್ ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ಜಿ.ಎಸ್.ಚಂದ್ರಪ್ಪ, ಜಿಲ್ಲಾ ಉಪಾಧ್ಯಕ್ಷ ಲಕ್ಷ್ಮಣಗೌಡ, ಮಹಿಳಾ ಘಟಕದ ಅಧ್ಯಕ್ಷ ಜಯಂತಿ ಇದ್ದರು.