ಮೋದಿ ರೋಡ್​ ಶೋನಿಂದ ಜನರಿಗೆ ತೊಂದರೆ ಹೊರತು ಬಿಜೆಪಿಗೆ ಲಾಭ ಇಲ್ಲ: ಮಾಜಿ ಸಿಎಂ ಎಚ್​ಡಿಕೆ ಟೀಕೆ

HD Kumaraswamy Modi Road Show
Published on

ಚಾಮರಾಜನಗರ: ಪ್ರಧಾನಿ ಮೋದಿ ಅವರ ರೋಡ್​ ಶೋನಿಂದ ಜನರಿಗೆ ತೊಂದರೆಯೇ ಹೊರತು ಬಿಜೆಪಿಗೆ ಅದರಿಂದ ಏನು ಲಾಭ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಅವರು ವಾಗ್ದಾಳಿ ನಡೆಸಿದರು.

ಹನೂರಿನಲ್ಲಿ ಮಾತನಾಡಿದ ಎಚ್‌ಡಿಕೆ, ಮೋದಿ ಜನರಿಗೆ ತೊಂದರೆ ಕೊಟ್ಟು ರೋಡ್ ಶೋ ಮಾಡುತ್ತಿದ್ದಾರೆ. ರೋಡ್ ಶೋನಿಂದ ದುಡಿಯುವ ಜನ ಬೀದಿ ಪಾಲಾಗುತ್ತಿದ್ದಾರೆ. ಯಾವ ಪುರುಷಾರ್ಥಕ್ಕೆ ರೋಡ್ ಶೋ ಮಾಡ್ತಿದ್ದಾರೆ ಎಂದು ಟೀಕಾ ಪ್ರಹಾರ ನಡೆಸಿದರು.

ನಾಳೆ ನೀಟ್ ಪರೀಕ್ಷೆ ಬರೆಯುವ ಮಕ್ಕಳ ಮೇಲೆ ರೋಡ್​ ಶೋ ಪರಿಣಾಮ ಬೀರುತ್ತದೆ. ಮನೆ ಬಾಗಿಲು ತೆಗೆಯಬೇಡಿ, ಓಣಿಯಲ್ಲಿ ಓಡಾಡಬೇಡಿ ಅಂತಾರೆ, ಹಾಗದರೆ ರೋಡ್ ಶೋ ಯಾಕೆ ಮಾಡ್ತೀರಾ? ಯಾರೋ ಕೆಲವರನ್ನು ತುಂಬಿಕೊಬಂದು‌ ನಿಲ್ಲಿಸಿ ಮೋದಿ ಮೋದಿ ಎಂದು ಕೂಗಿಸಿಕೊಂಡು ಹೋಗ್ತಾರೆ. ಇದರಿಂದ ಜನರಿಗೆ ತೊಂದರೆಯೇ ಹೊರತು ಬಿಜೆಪಿಗೆ ಲಾಭ ಇಲ್ಲ ಎಂದು ಕಿಡಿಕಾರಿದರು.

ಸಮೀಕ್ಷೆಗಳ ವಿರುದ್ಧ ಕಿಡಿ

ರಾಜ್ಯದಲ್ಲಿ ಕಳೆದ ಎರಡು ತಿಂಗಳಿನಿಂದ ಬರುತ್ತಿರುವ ಸಮೀಕ್ಷೆಗಳು ಕೃತಕವಾಗಿವೆ. ರಾಷ್ಟ್ರೀಯ ಪಕ್ಷಗಳು ಹಣ ಕೊಟ್ಟು ಜನರ ಭಾವನೆಗಳನ್ನು ಕದಡುವ ಕೆಲಸ ಮಾಡುತ್ತಿವೆ. ಈ ಸಮೀಕ್ಷೆಗಳಲ್ಲಿ ಯಾವುದೇ ಸತ್ಯಾಂಶವಿಲ್ಲ. ಈ ಸಮೀಕ್ಷೆಗಳು ರಾಷ್ಟ್ರೀಯ ಪಕ್ಷಗಳ ಹಣಕ್ಕೋಸ್ಕರ ಮಾಡಿರುವ ಸಮೀಕ್ಷೆಗಳು. ಈ ಸಮೀಕ್ಷೆಗಳೆಲ್ಲ ಈ ಬಾರಿ‌ ಉಲ್ಟಾ ಹೊಡೆಯುತ್ತವೆ. ಯಾವುದೇ ರಾಷ್ಟ್ರೀಯ ಪಕ್ಷಕ್ಕೂ ಸ್ಪಷ್ಟ ಬಹುಮತ ಸಿಗಲ್ಲ‌. ಅದು ಅವರ ಕನಸು. ಸಮೀಕ್ಷೆಗಳಲ್ಲಿ ಜೆಡಿಎಸ್‌ಗೆ ಕಡಿಮೆ ಸ್ಥಾನ ಕೊಟ್ಟಿರುವವರು ಆನಂದಪಡಲಿ. ಸಮೀಕ್ಷೆ ಮೀರಿ‌ ಜೆಡಿಎಸ್ ಹೆಚ್ಚಿ‌ನ ಸ್ಥಾನ ಗೆಲ್ಲಲಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net