

ಬೆಂಗಳೂರು: ದುಬೈನಲ್ಲಿ ಆಯೋಜಿಸಿರುವ ಕೆಂಪೇಗೌಡ ಜಯಂತಿಯಲ್ಲಿ ಪಾಲ್ಗೊಳ್ಳಲು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಶನಿವಾರ ಪ್ರಯಾಣ ಬೆಳೆಸಿದರು. ದುಬೈ ಒಕ್ಕಲಿಗರ ಸಂಘ ಈ ಕಾರ್ಯಕ್ರಮ ಆಯೋಜಿಸಿದೆ.
ಕುಮಾರಸ್ವಾಮಿ ತಮ್ಮ ಪತ್ನಿ ಅನಿತಾ ಕುಮಾರಸ್ವಾಮಿ ಜತೆ ಪ್ರಯಾಣ ಬೆಳೆಸಿದ್ದಾರೆ. ನ.4 ರಂದು ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇನ್ನೊಂದೆಡೆ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಭೇಟಿಯಾಗಿದ್ದಾರೆ.
ಬಿಜೆಪಿ ಜತೆ ಮೈತ್ರಿ ಮಾಡಿಕೊಂಡ ಬೆನ್ಮಲ್ಲೇ ನಿಖಿಲ್ ಕುಮಾರಸ್ವಾಮಿ ಬಿಜೆಪಿ ನಾಯಕರನ್ನು ಭೇಟಿ ಮಾಡುತ್ತಿದ್ದಾರೆ.
ಭೇಟಿಯ ಬಗ್ಗೆ ನಿಖಿಲ್ ಕುಮಾರಸ್ವಾಮಿಯವರು ತನ್ನ ಎಕ್ಸ್ ಖಾತೆಯಲ್ಲಿ ತಿಳಿಸಿದ್ದಾರೆ. ಇದೊಂದು ಉತ್ತಮ ಬೆಳವಣಿಗೆ ಎಂದು ನಿಖಿಲ್ ಹೇಳಿಕೊಂಡಿದ್ದಾರೆ.