ಮಾಜಿ ಸಿಎಂ ವೀರೇಂದ್ರ ಪಾಟೀಲರ ಪತ್ನಿ ಶಾರದಾ ಪಾಟೀಲ ನಿಧನ

Sharada patil
Published on

ಬೆಂಗಳೂರು: ಮಾಜಿ ಮುಖ್ಯಮಂತ್ರಿ ದಿ. ವೀರೇಂದ್ರ ಪಾಟೀಲರ ಪತ್ನಿ ಶಾರದಾ ಪಾಟೀಲ ಅವರು ಬೆಂಗಳೂರಿನ ಸದಾಶಿವನಗರದ ಸ್ವಗೃಹದಲ್ಲಿ ಮಂಗಳವಾರ ನಿಧನರಾದರು.

ಶಾರದಾ ಪಾಟೀಲರಿಗೆ 93 ವರ್ಷ ವಯಸ್ಸಾಗಿತ್ತು. ಮಾಜಿ ಶಾಸಕ ಕೈಲಾಸನಾಥ್ ಪಾಟೀಲ ಮತ್ತು ಇಬ್ಬರು ಪುತ್ರಿಯರನ್ನು ಅವರು ಅಗಲಿದ್ದಾರೆ. ಅವರ ಪಾರ್ಥೀವ ಶರೀರವನ್ನು ಚಿಂಚೋಳಿಗೆ ತೆಗೆದುಕೊಂಡು ಹೋಗಲಾಗುವುದು.

ಚಿಂಚೋಳಿಯಲ್ಲಿರುವ ವೀರೇಂದ್ರ ಪಾಟೀಲರ ಸಮಾಧಿ ಪಕ್ಕದಲ್ಲೇ ಶಾರದಾ ಪಾಟೀಲರ ಅಂತ್ಯಕ್ರಿಯೆ ಬುಧವಾರ ಅಪರಾಹ್ನ ನಡೆಯಲಿದೆ ಎಂದು ಕೈಲಾಸನಾಥ ಪಾಟೀಲ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net