ಅಪರಿಚಿತ ವಾಹನ ಡಿಕ್ಕಿಯಾಗಿ ಗ್ರಾಪಂ ಮಾಜಿ ಸದಸ್ಯ ಸಾವು

Published on

ಮಳವಳ್ಳಿ : ತಾಲೂಕಿನ ಬಂಡೂರು ಬಳಿ ಬುಧವಾರ ರಾತ್ರಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಬಂಡೂರು ಗ್ರಾಮದ ನಿವಾಸಿ, ಗ್ರಾಪಂ ಮಾಜಿ ಸದಸ್ಯ ಶಿವಮಲ್ಲಯ್ಯ(48) ಮೃತಪಟ್ಟವರು. ಅವರು ಬೈಕ್‌ನಲ್ಲಿ ಬರುತ್ತಿದ್ದ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿದೆ. ಅವಘಡ ನಡೆದ ಕೆಲ ಸಮಯದ ನಂತರ ದಾರಿಹೋಕರು ಗಮನಿಸಿದ್ದು, ತೀವ್ರವಾಗಿ ಗಾಯಗೊಂಡ ಅವರನ್ನು ಆಸ್ಪತ್ರೆಗೆ ಸಾಗಿಸುವ ಹೊತ್ತಿಗೆ ಶಿವಮಲ್ಲಯ್ಯ ಸಾವನ್ನಪ್ಪಿದ್ದರು. ಪಟ್ಟಣದ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ಮೃತದೇಹವನ್ನು ಸಾಗಿಸಲಾಗಿದೆ. ಗುರುವಾರ ಮರಣೋತ್ತರ ಪರೀಕ್ಷೆಯ ನಂತರ ಕುಟುಂಬದವರಿಗೆ ಮೃತದೇಹ ಹಸ್ತಾಂತರಿಸಲಾಯಿತು. ಗ್ರಾಮಾಂತರ ಠಾಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net