ಮರ- ಗಿಡದ ನೆರಳು ಗೊತ್ತಿಲ್ಲ, ಸುಟ್ಟು ಕರಕಲಾಗಿರ್ತಾರೆ…ನಮ್ಮ ಖರ್ಗೆಯವರನ್ನ ನೋಡಿದ್ರೇ ಗೊತ್ತಾಗುತ್ತೆ: ಆರಗ ಜ್ಞಾನೇಂದ್ರ ವ್ಯಂಗ್ಯ

araga jnanendra
Published on

ಶಿವಮೊಗ್ಗ: ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ, ನಡೆಯುತ್ತಿದ್ದ ಪ್ರತಿಭಟನೆ ವೇಳೆ, ಭಾಷಣ ಮಾಡುವ ಬರದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ  ಮೈ ಬಣ್ಣದ ಬಗ್ಗೆ ಮಾಜಿ ಗೃಹಸಚಿವ ಆರಗ ಜ್ಞಾನೇಂದ್ರ ಟೀಕಿಸಿದ್ದಾರೆ.

ಮಾಜಿ ಸಚಿವ ಹಾಗೂ ತೀರ್ಥಹಳ್ಳಿ ಶಾಸಕರಾದ ಆರಗ ಜ್ಞಾನೇಂದ್ರ ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ, ತೀರ್ಥಹಳ್ಳಿಯಲ್ಲಿ ಪ್ರತಿಭಟನೆ ಮಾಡುವ ವೇಳೆ ಈಶ್ವರ್ ಖಂಡ್ರೇ ಹಾಗೂ ಮಲ್ಲಿಕಾರ್ಜುನ್ ಖರ್ಗೆ ವಿರುದ್ಧ ತೀವ್ರ ವಾಗ್ದಾಳಿ ಮಾಡಿದ್ದಾರೆ.

ಈ ವೇಳೆ ಮಾತನಾಡಿದ ಅವರು, ಕಸ್ತೂರಿ ರಂಗನ್ ವರದಿ ಜಾರಿ ವರದಿ ಜಾರಿಯಾದರೆ ಮಲೆನಾಡು ಭಾಗದ ಪ್ರತಿ ಕಾಮಗಾರಿಗೂ ಕೇಂದ್ರದ ಅನುಮತಿ ಪಡೆಯಬೇಕಾಗುತ್ತದೆ. ನಮ್ಮ ದುರಾದೃಷ್ಟ ಎಂದರೆ ಆ ಭಾಗದವರು ಫಾರೆಸ್ಟ್ ಮಿನಿಸ್ಟರ್ ಅಗಿದ್ದಾರೆ. ಫಾರೆಸ್ಟ್ ಇಲ್ಲದವರು ಮಿನಿಸ್ಟರ್ ಅಗಿದ್ದಾರೆ ಎಂದು ಕಿಡಿಕಾರಿದ್ದಾರೆ.

ಅವರಿಗೆ ಮರ- ಗಿಡ ಎನ್ನುವುದರ ಬಗ್ಗೆ ಗೊತ್ತಿಲ್ಲ. ಮರದ ನೆರಳಿನ ಮಹತ್ವ ಗೊತ್ತಿಲ್ಲ. ಸುಟ್ಟು ಕರಕಲಾಗಿರ್ತಾರೆ..., ನಮ್ಮ ಖರ್ಗೆಯವರನ್ನ ನೋಡಿದ್ರೇ ಗೊತ್ತಾಗುತ್ತದೆ. ಪಾಪ.., ತಲೆ ಕೂದಲು ಮುಚ್ಚಿಕೊಂಡಿದ್ದಕ್ಕೆ ಸ್ವಲ್ಪ ಉಳಿದುಕೊಂಡಿದ್ದಾರೆ. ಅದೇ ನೆರಳು ಅವರಿಗೆ.  ಮಲೆನಾಡು ಮತ್ತು ಪಶ್ಚಿಮಘಟ್ಟದ ಬದುಕು ಅವರಿಗೆ ಗೊತ್ತಿಲ್ಲ ಎಂದು ವಾಗ್ದಾಳಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net