ಟೀಮ್​ ಇಂಡಿಯಾ ಮಾಜಿ ನಾಯಕ ಅಜರುದ್ದೀನ್​ ಕಾರು ಅಪಘಾತ

Car Accident
Published on

ಜೈಪುರ: ಟೀಮ್​ ಇಂಡಿಯಾದ ಮಾಜಿ ನಾಯಕ ಮೊಹಮ್ಮದ್​ ಅಜರುದ್ದೀನ್ ಕಾರು ಅಪಘಾತದಿಂದ ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ರಾಜಸ್ಥಾನದ ಸೂರ್ವಾಲದಲ್ಲಿ ಬುಧವಾರ ಬೆಳಗ್ಗೆ ನಡೆದಿದೆ.

ಯಾವುದೇ ಗಾಯಗಳಾಗದೇ ಪ್ರಾಣಾಪಾಯದಿಂದ ಬಚಾವ್​ ಆಗಿದ್ದಾರೆಂದು ಅಜರುದ್ದೀನ್​ ಆಪ್ತ ಸಹಾಯಕ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಲಾಲ್ಸೋಟ್​ ಕೋಟಾ ಹೈವೇಯಲ್ಲಿ ಅಪಘಾತ ಸಂಭವಿಸಿದೆ. ಅಜರ್​ ರಣಥಂಬೋರ್​ಗೆ ತಮ್ಮ ಕುಟುಂಬದೊಂದಿಗೆ ಆಗಮಿಸುತ್ತಿದ್ದಾಗ ಅಪಘಾತ ನಡೆದಿದ್ದು, ಮತ್ತೊಂದು ಕಾರಿನಲ್ಲಿ ಅವರನ್ನು ಹೋಟೆಲ್​ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ.

ಇನ್ನು ಕ್ರಿಕೆಟ್​ ವಿಚಾರಕ್ಕೆ ಬಂದರೆ ಅಜರುದ್ದೀನ್​ ಅವರು 99 ಟೆಸ್ಟ್​ ಪಂದ್ಯಗಳನ್ನ ಟೀಮ್​ ಇಂಡಿಯಾವನ್ನು ಪ್ರತಿನಿಧಿಸಿದ್ದಾರೆ. ಕೆಲವು ಏಕದಿನ ಪಂದ್ಯಗಳಲ್ಲೂ ತಮ್ಮ ಛಾಪು ಮೂಡಿಸಿರುವ ಅಜರ್​ ಕೆಲ ದಾಖಲೆಗಳನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ.

1992 ರಿಂದ 1999ರವರೆಗಿನ ಮೂರು ಏಕದಿನ ವಿಶ್ವಕಪ್ ಸರಣಿಯನ್ನು ಅಜರ್​ ಟೀಮ್​ ಇಂಡಿಯಾ ನಾಯಕತ್ವವನ್ನು ವಹಿಸಿಕೊಂಡಿದ್ದರು. 1996ರ ವಿಶ್ವಕಪ್​ ಸರಣಿಯಲ್ಲಿ ಅಜರ್​ ಪಡೆ ಸೆಮಿಫೈನಲ್​ಗೆ ಪ್ರವೇಶ ಪಡೆದಿತ್ತು. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net