

ತಿರುವನಂತಪುರಂ; ಕೇರಳ ರಾಜಕೀಯದ ಮೇರು ವ್ಯಕ್ತಿತ್ವ ಮತ್ತು ಭಾರತದ ಅತ್ಯಂತ ಹಿರಿಯ ಕಮ್ಯುನಿಸ್ಟ್ ಪಕ್ಷದ ನಾಯಕ ವಿ.ಎಸ್.ಅಚ್ಯುತಾನಂದನ್ ಅವರು ಇಂದು (21) ದೀರ್ಘಕಾಲದ ಅನಾರೋಗ್ಯದಿಂದಾಗಿ ಮೃತ ಹೊಂದಿದ್ದಾರೆ.
2019 ರಲ್ಲಿ ಪಾರ್ಶ್ವವಾಯುವಿಗೆ ಒಳಗಾದ ನಂತರ ಅವರು ಹಾಸಿಗೆ ಹಿಡಿದಿದ್ದರು. 1964 ರಲ್ಲಿ ಭಾರತೀಯ ಕಮ್ಯುನಿಸ್ಟ್ ಪಕ್ಷ (ಸಿಪಿಐ) ವನ್ನು ತೊರೆದು ಸಿಪಿಐ (ಎಂ) ಸ್ಥಾಪಿಸಿದ ನಾಯಕ ಇವರಾಗಿದ್ದಾರೆ. ರಾಜ್ಯ ವಿಧಾನಸಭೆಯಲ್ಲಿ ಮೂರು ಬಾರಿ ವಿರೋಧ ಪಕ್ಷದ ನಾಯಕರಾಗಿದ್ದ ಅಚ್ಯುತಾನಂದನ್, ಸಿಪಿಐ (ಎಂ) ನ ರಾಜ್ಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ಅವರು 2021 ರವರೆಗೆ ವಿಧಾನಸಭೆಯ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದರು.
ಅವರಿಗೆ 101 ವರ್ಷ ವಯಸ್ಸಾಗಿತ್ತು. ಕೆಲವು ದಿನಗಳ ಹಿಂದೆ ಹೃದಯಾಘಾತಕ್ಕೀಡಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ನಿಗಾ ಘಟಕದಲ್ಲಿದ್ದ ಅವರು ಇಂದು ಚಿಕಿತ್ಸೆ ಫಲಕಾರಿಯಾಗದೇ ಇಂದು ಮಧ್ಯಾಹ್ನ 3.20 ಕ್ಕೆ ತಿರುವನಂತಪುರದ ಎಸ್ಯುಟಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
(ಏಜೆನ್ಸೀಸ್)