ಬಿಜೆಪಿಯಿಂದ ಮಾಜಿ ಸಚಿವ ಕೆಎಸ್ ಈಶ್ವರಪ್ಪ 6 ವರ್ಷ ಉಚ್ಚಾಟನೆ!

KS Eshwarappa
Published on

ಬೆಂಗಳೂರು: ಬಿಜೆಪಿಯಿಂದ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಅವರನ್ನು 6 ವರ್ಷಗಳ ಕಾಲ ಉಚ್ಚಾಟನೆ ಮಾಡಿ ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್ ಆದೇಶ ಹೊರಡಿಸಿದ್ದಾರೆ.

ಈ ಬಗ್ಗೆ ಸೋಮವಾರ ಸಂಜೆ ರಾಜ್ಯ ಬಿಜೆಪಿ ಘಟಕದಿಂದ ಆದೇಶ ಜಾರಿ ಮಾಡಿದ್ದು, ಪಕ್ಷದ ಆದೇಶವನ್ನು ಉಲ್ಲಂಘಿಸಿ ಶಿವಮೊಗ್ಗದಿಂದ ಸ್ಪರ್ಧೆ ಮಾಡಿದ್ದೀರಾ. ಪಕ್ಷದ ಮುಜುಗರಕ್ಕೆ ಕಾರಣವಾಗಿದ್ದೀರಾ. ಇದು ಪಕ್ಷದ ಶಿಸ್ತು ಉಲ್ಲಂಘಟನೆ. ತತಕ್ಷಣದಿಂದ ಜಾರಿಗೆ ಬರುವಂತೆ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ " ಎಂದು ಉಲ್ಲೇಖಿಸಲಾಗಿದೆ.

ಕೆಎಸ್‌ ಈಶ್ವರಪ್ಪ ಅವರನ್ನು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಹಿಂದಕ್ಕೆ ಸರಿಸುವ ನಿಟ್ಟಿನಲ್ಲಿ ಸಾಕಷ್ಟು ಸಭೆಗಳು ನಡೆದವು. ಹಿರಿಯ ಮುಖಂಡರು ಮಾತನಾಡಿದರು. ಆದರೂ, ಈಶ್ವರಪ್ಪ ಚುನಾವಣೆ ಸ್ಪರ್ಧೆ ಮಾಡುತ್ತೇನೆ ಎಂದು ಪಟ್ಟು ಹಿಡಿದಿದ್ದರು. ಕರ್ನಾಟಕದಲ್ಲಿ ನಡೆಯುವ 2 ನೇ ಹಂತದ ಚುನಾವಣೆಯ ನಾಮಪತ್ರ ಹಿಂಪಡೆಯುವ ದಿನಾಂಕ ಏಪ್ರಿಲ್‌ 22 ಆಗಿತ್ತು. ಆದರೆ, ಈಶ್ವರಪ್ಪ ನಾಮಪತ್ರ ಹಿಂಪಡೆಯದ ಹಿನ್ನೆಲೆ ಪಕ್ಷದಿಂದ ಹೊರ ಹಾಕಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net