ಕರೊನಾಗೆ ಬಲಿಯಾದ ಮಾಜಿ ಸಚಿವ

Death Minister
Published on

ಸುರಪುರ(ಯಾದಗಿರಿ): ಮಾಜಿ ಸಚಿವ ರಾಜಾ ಮದನ ಗೋಪಾಲ ನಾಯಕ (76) ಸೋಮವಾರ ಕರೊನಾಕ್ಕೆ ಬಲಿಯಾಗಿದ್ದಾರೆ. ಮೃತರಿಗೆ ಪತ್ನಿ, ಇಬ್ಬರು ಪುತ್ರರಿದ್ದಾರೆ. ಮದನ ಗೋಪಾಲ ಅವರು ಎರಡು ಬಾರಿ ಶಾಸಕರಾಗಿ ಒಂದು ಬಾರಿ ಮಂತ್ರಿಯಾಗಿದ್ದರು.

ಕೆಲ ದಿನಗಳಿಂದ ಅಸ್ವಸ್ಥರಾಗಿದ್ದ ಅವರನ್ನು ಮೂರು ದಿನಗಳ ಹಿಂದೆ ಕಲಬುರಗಿಯ ಇಎಸ್​ಐ ಆಸ್ಪತ್ರೆಗೆ ತಂದು ಸೇರಿಸಲಾಗಿತ್ತು. ಇಲ್ಲಿ ಅವರ ರಕ್ತ ಮತ್ತು ಗಂಟಲ ದ್ರವ ಪರೀಕ್ಷೆ ಮಾಡಿದಾಗ ಕರೊನಾ ಸೋಂಕು ಇರುವುದು ಪತ್ತೆಯಾಯಿತು. ನಂತರ ಅವರಿಗೆ ಚಿಕಿತ್ಸೆ ನೀಡಲಾಗು ತ್ತಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಅವರು ಮೃತಪಟ್ಟರೆಂದು ಹೇಳಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net