ಕೇಕ್ ಕತ್ತರಿಸುವ ಮುನ್ನ ತಲ್ವಾರ್ ಪ್ರದರ್ಶನ! ಮಾಜಿ ಸಚಿವರ ನಡೆಗೆ ವ್ಯಕ್ತವಾಯ್ತು ಟೀಕೆ

H Anjaneya
Published on

ಚಿತ್ರದುರ್ಗ: ಮಾಜಿ ಸಚಿವ ಎಚ್.ಆಂಜನೇಯ ಅವರು ತಮ್ಮ 68 ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಹುಟ್ಟುಹಬ್ಬದ ಆಚರಣೆಯ ವೇಳೆ ತಲ್ವಾರ್ ಪ್ರದರ್ಶಿಸಿದ್ದಾರೆ. ಸದ್ಯ ಅಂಜನೇಯ ಅವರು ತಲ್ವಾರ್ ಪ್ರದರ್ಶಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಟೀಕೆಗಳೂ ವ್ಯಕ್ತವಾಗುತ್ತಿವೆ.

ತಲ್ವಾರ್ ಪ್ರದರ್ಶನ

ಬೆಂಬಲಿಗರು, ಅಭಿಮಾನಿಗಳೊಂದಿಗೆ ಎಚ್.ಆಂಜನೇಯ ಸಿಬಾರ ಬಳಿಯ ತೋಟದ ಮನೆ ಆವರಣದಲ್ಲಿ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದರು. ಈ ವೇಳೆ ಕೇಕ್ ಕತ್ತರಿಸುವ ಮುನ್ನ ಬೆಂಬಲಿಗರು ನೀಡಿದ ತಲ್ವಾರ್ ಪ್ರದರ್ಶಿಸಿದ್ದಾರೆ. ಇನ್ನು ಹುಟ್ಟು ಹಬ್ಬದ ಸಂಭ್ರಮದಲ್ಲಿರುವ ಮಾಜಿ ಸಚಿವರಿಗೆ ನೂರಾರು ಸಂಖ್ಯೆಯಲ್ಲಿ ಅಭಿಮಾನಿಗಳು, ಬೆಂಬಲಿಗರು ಶುಭಾಶಯ ಕೋರಿದ್ದಾರೆ.

ಗೆಲ್ಲುವ ವಿಶ್ವಾಸ

ಹೊಳಲ್ಕೆರೆ ಕಾಂಗ್ರೆಸ್ ಕ್ಷೇತ್ರದ ಅಭ್ಯರ್ಥಿಯಾಗಿರುವ ಮಾಜಿ ಸಚಿವ ಎಚ್.ಆಂಜನೇಯ ಅವರು ಚುನಾವಣೆ ಎದುರಿಸಲು ಅಂತಿಮ ಹಂತದ ಸಿದ್ಧತೆಯಲ್ಲಿದ್ದಾರೆ. ಈ ಬಾರಿಯೂ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿ, ಅಭಿಮಾನಿಗಳು, ಬೆಂಬಲಿಗರೊಂದಿಗೆ ಹುಟ್ಟು ಹಬ್ಬ ಆಚರಣೆ ಮಾಡಿಕೊಂಡಿದ್ದಾರೆ.

ಲಿಂಗಾಯತ ಮತಗಳು ನಿರ್ಣಾಯಕ!

ಮಾಜಿ ಸಚಿವ ಎಚ್.ಆಂಜನೇಯ ಅವರು ಚುನಾವಣೆಗೆ ಸ್ಪರ್ಧಿಸುತ್ತಿರುವಂತಹ ಹೊಳಲ್ಕೆರೆ ಕ್ಷೇತ್ರದಲ್ಲಿ 500ಕ್ಕೂ ಹೆಚ್ಚು ಲಿಂಗಾಯತ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್​ಗೆ ಸೇರ್ಪಡೆಯಾಗಿದ್ದಾರೆ. ಹೊಳಲ್ಕೆರೆ ಕ್ಷೇತ್ರದಲ್ಲಿ ನಿರ್ಣಾಯಕ ಎಂದು ಹೇಳಲಾಗಿರುವ ಲಿಂಗಾಯತ ಸಮಾಜದ ಮತದಾರರು ಈ ಬಾರಿ ಕಾಂಗ್ರೆಸ್ ಕಡೆಗೆ ಒಲವು ತೋರಿದ್ದಾರೆ ಎನ್ನಲಾಗಿದೆ. ಸದ್ಯ ಬೆಳವಣಿಗೆಯಿಂದ ಹೊಳಲ್ಕೆರೆ ಕ್ಷೇತ್ರದಲ್ಲಿ ಮಾಜಿ ಸಚಿವ ಆಂಜನೇಯ ಅವರ ಕೈ ಬಲಪಡಿಸಿದಂತಾಗಿದೆ ಎಂದು ಅಂದಾಜಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net