ಮಾಜಿ MLC, ವೀರಶೈವ ಲಿಂಗಾಯತ ಮಹಾಸಭಾ ಮಾಜಿ ಅಧ್ಯಕ್ಷ ಎನ್​.ತಿಪ್ಪಣ್ಣ ನಿಧನ | Passes away

dk - 2025-07-11T094715.519
Published on

Passes away: ಮಾಜಿ ವಿಧಾನ ಪರಿಷತ್ ಸದಸ್ಯ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಮಾಜಿ ಅಧ್ಯಕ್ಷ ಎನ್​. ತಿಪ್ಪಣ್ಣ(97), ವಯೋಸಹಜ ಕಾಯಿಲೆಯಿಂದ ಶುಕ್ರವಾರ(ಜು.11) ಬೆಳಗ್ಗೆ ಬಳ್ಳಾರಿ ನಿವಾಸದಲ್ಲಿ ನಿಧನರಾಗಿದ್ದಾರೆ.

ಇಳಿ ವಯಸ್ಸಿನಲ್ಲೂ ತಮ್ಮ ಕೆಲಸಗಳಿಂದಲೇ ಜನರ ಮನಗೆದಿದ್ದ ಇವರು, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷರಾಗಿದ್ದ ಎನ್​.ತಿಪ್ಪಣ್ಣ, ವಿಧಾನ ಪರಿಷತ್ತಿನ ಸದಸ್ಯರಾಗಿ, ಸಭಾಪತಿಯಾಗಿಯಾಗಿದ್ದರು. ಅಲ್ಲದೆ, ಕರ್ನಾಟಕ ವಿವಿಯ ಸಿಂಡಿಕೇಟ್ ಸದಸ್ಯರಾಗಿ, ಗುಲ್ಬರ್ಗ ವಿವಿಯ ಸೆನೆಟ್ ಸದಸ್ಯರಾಗಿ, ರಾಜ್ಯ ವಕೀಲರ ಸಂಘದ ಅಧ್ಯಕ್ಷರಾಗಿ, ಬಳ್ಳಾರಿ ವೀವಿ ಸಂಘದ ಅಧ್ಯಕ್ಷರಾಗಿ ಸೇರಿದಂತೆ ನಾನಾ ಸಂಘ ಸಂಸ್ಥೆಗಳಿಗೆ ಪದಾಧಿಕಾರಿಗಳಾಗಿ ಸೇವೆ ಸಲ್ಲಿಸಿದ್ದರು.

ನಾಳೆ ಅಂತ್ಯಕ್ರಿಯೆ

ಇಂದು ಬಳ್ಳಾರಿ ನಿವಾಸದಲ್ಲಿ ಅಂತಿಮ‌ ದರ್ಶನಕ್ಕೆ ಅವಕಾಶ ವ್ಯವಸ್ಥೆ ಮಾಡಲಾಗಿದೆ. ಹುಟ್ಟೂರು ಚಿತ್ರದುರ್ಗ ಜಿಲ್ಲೆ ತುರುವನೂರಿನಲ್ಲಿ ನಾಳೆ(ಜು.12) ಮಧ್ಯಾಹ್ನ 1.ಗಂಟೆಗೆ ಎನ್ ತಿಪ್ಪಣ್ಣ ಅಂತ್ಯಕ್ರಿಯೆ ನಡೆಯಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net