ಪ್ರಧಾನಮಂತ್ರಿಗಳ ವಸ್ತು ಸಂಗ್ರಹಾಲಯಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ

hdd-1
Published on

ನವದೆಹಲಿ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಶನಿವಾರ ನವದೆಹಲಿಯಲ್ಲಿರುವ ಪ್ರಧಾನಮಂತ್ರಿಗಳ ವಸ್ತು ಸಂಗ್ರಹಾಲಯಕ್ಕೆ ಭೇಟಿ ನೀಡಿದರು.

ಭಾರತಕ್ಕೆ ತಮ್ಮದೇ ಆದ ಅನನ್ಯ ಕೊಡುಗೆ ನೀಡಿರುವ ಎಲ್ಲ ಪ್ರಧಾನಿಗಳ ಮಾಹಿತಿಯನ್ನು ವಸ್ತು ಸಂಗ್ರಹಾಲಯದಲ್ಲಿ ಪ್ರದರ್ಶಿಸಲಾಗಿದ್ದು, ಈ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಕೈಗೊಂಡ ಕ್ರಮಗಳ ಬಗ್ಗೆ ಅತೀವ ಸಂತಸ ವ್ಯಕ್ತಪಡಿಸಿದರು.

ಪ್ರಧಾನಿಗಳ ವಸ್ತು ಸಂಗ್ರಹಾಲಯಕ್ಕೆ ಭೇಟಿ ನೀಡಿದ ಬಗ್ಗೆ ದೇವೇಗೌಡ ಸಂತಸ ವ್ಯಕ್ತಪಡಿಸಿದ್ದು, ಅಲ್ಲಿ ಕಳೆದ ಕ್ಷಣಗಳ ಬಗ್ಗೆ ಭಾವುಕರಾಗಿ ಪ್ರತಿಕ್ರಿಯಿಸಿದ್ದಾರೆ.

ಈ ಸಂದರ್ಭದಲ್ಲಿ ವಸ್ತು ಸಂಗ್ರಹಾಲಯದ ಅಧಿಕಾರಿಗಳು ಮಾಜಿ ಪ್ರಧಾನಿಗಳನ್ನು ಬರ ಮಾಡಿಕೊಂಡು, ಅಲ್ಲಿನ ಎಲ್ಲ ಪ್ರಧಾನಿಗಳ ಕುರಿತ ಮಾಹಿತಿಯನ್ನು ನೀಡಿದರು. ಅಲ್ಲದೆ, ವೀಕ್ಷಕರ ಪುಸ್ತಕದಲ್ಲಿ ತಮ್ಮ ಅಭಿಪ್ರಾಯವನ್ನು ದೇವೇಗೌಡ ಬರೆದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net