ಮಾಜಿ ಸ್ಪೀಕರ್ ರಮೇಶ್ ಕುಮಾರ್ ಪತ್ನಿ ನಿಧನ

Ramesh Kumar
Published on

ಕೋಲಾರ: ಮಾಜಿ ಸ್ಪೀಕರ್, ಕೆ. ಆರ್ ರಮೇಶ್ ಕುಮಾರ್​ ಅವರ ಪತ್ನಿ ವಿಜಯಮ್ಮ(69) ಇಂದು ಮಧ್ಯಾಹ್ನ ಮೃತಪಟ್ಟಿದ್ದಾರೆ. ಕಳೆದ ಎರಡು ತಿಂಗಳಿನಿಂದ ರಮೇಶ್ ಕುಮಾರ್ ಪತ್ನಿ ವಿಜಯಮ್ಮ ಅನಾರೋಗ್ಯಕ್ಕೆ ತುತ್ತಾಗಿದ್ದರು.

ಹೆಚ್ವಿನ ಚಿಕಿತ್ಸೆಗಾಗಿ ವಿಜಯಮ್ಮ ಅವರನ್ನು ಎರಡು ದಿನಗಳ ಹಿಂದೆ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಇಂದು ಮಧ್ಯಾಹ್ನ 2 ಗಂಟೆಗೆ ಸಾವನ್ನಪ್ಪಿದ್ದಾರೆ. ಮೃತರು ಪತಿ, ಪುತ್ರಿ, ಪುತ್ರ ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net