ಸಣ್ಣ ನೀರಾವರಿ ಇಲಾಖೆಗೆ ಪ್ರತ್ಯೇಕ ವೃಂದ ಮತ್ತು ನೇಮಕ ನಿಯಮಾವಳಿ ರಚನೆ | No recruitment in Minor irrigation department

Minor irrigation
Published on

ಬೆಂಗಳೂರು: ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯ ವೃಂದ ಮತ್ತು ನೇಮಕ ನಿಯಮಾವಳಿಗೆ ಆಕ್ಷೇಪಣೆ ಹಾಗೂ ಸಲಹೆಗಳಿಗೆ ಆಹ್ವಾನಿಸಿದ್ದು, ಯಾವುದೇ ಹುದ್ದೆಗಳನ್ನು ಭರ್ತಿ ಮಾಡುತ್ತಿಲ್ಲವೆಂದು ಸಣ್ಣ ನೀರಾವರಿ ಇಲಾಖೆ ತಿಳಿಸಿದೆ.

ಸಚಿವ ಸಂಪುಟದ ಇತ್ತೀಚಿನ ಸಭೆಯಲ್ಲಿ ಕೈಗೊಂಡ ನಿರ್ಧಾರದಂತೆ ಸಣ್ಣ ನೀರಾವರಿ ಇಲಾಖೆಗೆ ಪ್ರತ್ಯೇಕವಾಗಿ ‘ಕರ್ನಾಟಕ ಸಣ್ಣ ನೀರಾವರಿ ಇಲಾಖೆ ಸೇವೆಗಳ (ವೃಂದ ಮತ್ತು ನೇಮಕಾತಿ) ನಿಯಮಗಳು 2025’ನ್ನು ಕರ್ನಾಟಕ ವಿಶೇಷ ಪತ್ರದಲ್ಲಿ ಪ್ರಕಟಿಸಲಾಗಿದೆ.

ಆದರೆ ಸಾಮಾಜಿಕ ಜಾಲ ತಾಣವೊಂದರಲ್ಲಿ ಸಣ್ಣ ನೀರಾವರಿ ಇಲಾಖೆ ವಿವಿಧ ಹುದ್ದೆಗಳಿಗೆ ನೇಮಕಾತಿ ಎಂಬ ಸಂದೇಶ ಹರಿದಾಡುತ್ತಿದೆ. ಅಂತಹ ಯಾವುದೇ ನೇಮಕಾತಿಗಳು ನಡೆಯುತ್ತಿಲ್ಲ, ಇಂತಹ ಸಂದೇಶಗಳನ್ನು ನಂಬಿ ಮೋಸ ಹೋಗದೆ ಎಚ್ಚರಿಕೆವಹಿಸಬೇಕು ಎಂದು ಸಾರ್ವಜನಿಕರಿಗೆ ಇಲಾಖೆ ಕೋರಿದೆ.

15 ದಿನಗಳ ಕಾಲಾವಕಾಶ

ಇಲಾಖೆಯ ವೃಂದ ಮತ್ತು ನೇಮಕಾತಿ ಕರಡು ನಿಯಮಾವಳಿಗೆ ಆಕ್ಷೇಪಣೆ ಅಥವಾ ಸಲಹೆಗಳನ್ನು ಸಲ್ಲಿಸಲು 15 ದಿನಗಳ ಕಾಲಾವಕಾಶ ನೀಡಲಾಗಿದೆ. ಆದರೆ ಇದೇ ಅಧಿಸೂಚನೆಯನ್ನು ಮುಂದಿಟ್ಟು ಇಲಾಖೆ ನೇಮಕಾತಿ ಪ್ರಕ್ರಿಯೆ ಎಂದು ಬಿಂಬಿತ ಸಂದೇಶಗಳು ಹರಿದಾಡುತ್ತಿದ್ದು, ಯಾವುದೇ ಹುದ್ದೆಗೆ ನೇಮಕಾತಿ ನಡೆಯುತ್ತಿಲ್ಲವೆಂದು ಸಣ್ಣ ನೀರಾವರಿ ಇಲಾಖೆ ಸ್ಪಷ್ಟಪಡಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net