ಟ್ರಕ್​ಗಳ ನಡುವೆ ಭೀಕರ ಅಪಘಾತ!; ನಾಲ್ವರು ಕಟ್ಟಡ ಕಾರ್ಮಿಕರು ದುರ್ಮರಣ!

Untitled design (80)
Published on

ಪಶ್ಚಿಮ ಬಂಗಾಳ: ಎರಡು ಟ್ರಕ್​ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಕಟ್ಟಡ ಕಾರ್ಮಿಕರು ಮೃತಪಟ್ಟ ದಾರುಣ ಘಟನೆ ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯಲ್ಲಿ ಬುಧವಾರ (ನ.29) ವರದಿಯಾಗಿದೆ.

ಗುರಾಪ್ ಪೊಲೀಸ್ ಠಾಣೆ ವ್ಯಾಪ್ತಿಯ ಕಂಗ್ಸಾರಿ ಮೋರ್ ಪ್ರದೇಶದ ಬಳಿ ಇಂದು ಬೆಳಗ್ಗೆ ನಾಲ್ವರು ಕೂಲಿ ಕಾರ್ಮಿಕರು ಕೆಲಸಕ್ಕೆ ಕರೆದೊಯ್ಯುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಕಾರ್ಮಿಕರನ್ನು ಒಳಗೊಂಡಿದ್ದ ವ್ಯಾನ್‌ ಮತ್ತೊಂದು ಟ್ರಕ್​ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ನಾಲ್ವರನ್ನು ಕೂಡಲೇ ಬುರ್ದ್ವಾನ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ವೈದ್ಯರು ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದಾರೆ.

ಮೃತರನ್ನು ಜೀವನ್‌ದೀಪ್ ಬೌಲ್ ದಾಸ್ (26), ಮಂಗಲ್‌ದೀಪ್ ಬೌಲ್ ದಾಸ್ (32), ಬಿಸ್ವಜಿತ್ ರಾಯ್ (35) ಮತ್ತು ದಿವಾಕರ್ ಸಿಂಗ್ (22) ಎಂದು ಗುರುತಿಸಲಾಗಿದೆ. ಸಾವನ್ನಪ್ಪಿದ ನಾಲ್ವರು ಗುರಾಪ್‌ನ ಸಿಯಾಪುರ ಪ್ರದೇಶದ ನಿವಾಸಿಗಳು ಎಂದು ವರದಿ ಉಲ್ಲೇಖಿಸಿದೆ,(ಏಜೆನ್ಸೀಸ್).

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net