ಮಹಾರಾಷ್ಟ್ರದಾದ್ಯಂತ ಗಣೇಶ ಮೂರ್ತಿ ವಿಸರ್ಜನೆ ವೇಳೆ ನಾಲ್ವರು ಸಾವು, 13 ಮಂದಿ ನಾಪತ್ತೆ! Maharashtra

Birwadi, Maharashtra
Published on

Maharashtra: ಮಹಾರಾಷ್ಟ್ರದ ವಿವಿಧ ಜಿಲ್ಲೆಗಳಲ್ಲಿ ಗಣೇಶ ಮೂರ್ತಿ ವಿಸರ್ಜನೆ ವೇಳೆ ನಾಲ್ವರು ಜನರು ಮುಳುಗಿ ಸಾವನ್ನಪ್ಪಿದ್ದು, 13 ಮಂದಿ ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ಭಾನುವಾರ (ಸೆಪ್ಟೆಂಬರ್​,7) ತಿಳಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಗಣೇಶ ವಿಸರ್ಜನೆ ವೇಳೆ ಪುಣೆ ಜಿಲ್ಲೆಯ ಚಕನ್ ಪ್ರದೇಶದಲ್ಲಿ ನಾಲ್ವರು ಕೊಚ್ಚಿಹೋಗಿದ್ದಾರೆ. ಅಲ್ಲದೆ, ವಾಕಿ ಖುರ್ದ್‌ನಲ್ಲಿರುವ ಭಾಮಾ ನದಿಯಲ್ಲಿ ಇಬ್ಬರು ಪುರುಷರು ಮತ್ತು ಶೆಲ್ ಪಿಂಪಾಲ್‌ಗಾಂವ್‌ನಲ್ಲಿ ಮತ್ತೊಬ್ಬರು ಕೊಚ್ಚಿ ಹೋಗಿದ್ದಾರೆ. ಪುಣೆ ಗ್ರಾಮೀಣ ಪ್ರದೇಶದ ಬಿರ್ವಾಡಿಯಲ್ಲಿ ಮತ್ತೊಬ್ಬ ವ್ಯಕ್ತಿ ಬಾವಿಗೆ ಜಾರಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಬ್ಬರು ಮೃತದೇಹಗಳನ್ನು ಪತ್ತೆಯಾಗಿದ್ದು, ಉಳಿದ ಇಬ್ಬರಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ನಾಂದೇಡ್ ಜಿಲ್ಲೆಯ ಗಡೇಗಾಂವ್‌ನಲ್ಲಿ ನದಿಯಲ್ಲಿ ಮೂವರು ಕೊಚ್ಚಿ ಹೋಗಿದ್ದಾರೆ. ಇವರಲ್ಲಿ ಒಬ್ಬನನ್ನು ರಕ್ಷಿಸಲಾಗಿದೆ. ಇನ್ನಿಬ್ಬರಿಗಾಗಿ ಹುಡುಕಾಟ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಲ್ಲದೆ, ನಾಶಿಕ್, ಜಲಗಾಂವ್, ಥಾಣೆ ಮತ್ತು ಅಮರಾವತಿಯಲ್ಲೂ ಇದೇ ರೀತಿಯ ಘಟನೆಗಳು ವರದಿಯಾಗಿವೆ . ನಾಶಿಕ್‌ನಲ್ಲಿ ಗಣೇಶ ವಿಸರ್ಜನೆ ವೇಳೆ ನಾಲ್ವರು ಮುಳುಗಿ ಸಾವನ್ನಪ್ಪಿದ್ದಾರೆ.

ಜಲಗಾಂವ್‌ನಲ್ಲಿ ಮೂವರು ಜನರು ಕೊಚ್ಚಿ ಹೋಗಿದ್ದು, ಶವಗಳನ್ನು ಪತ್ತೆ ಹಚ್ಚುವ ಪ್ರಯತ್ನಗಳು ಮುಂದುವರೆದಿವೆ.

ಮಹಾರಾಷ್ಟ್ರದ ಕೆಲವು ಭಾಗಗಳಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ನದಿಗಳು ಉಕ್ಕಿ ಹರಿಯುತ್ತಿದ್ದು, ರಾಜ್ಯ ವಿಪತ್ತು ನಿರ್ವಹಣಾ ತಂಡಗಳು ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಗಳನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. (ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net