ನಾಲ್ವರು ಪೆಡ್ಲರ್ ಸೆರೆ

arrest (1)
Published on

ಬೆಂಗಳೂರು: ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಕೊಡಿಗೇಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಲೊಟ್ಟೆಗೊಲ್ಲಹಳ್ಳಿ ನಿವಾಸಿ ಅಜಿತ್ (26), ಯಶವಂತಪುರ ಬಿ.ಕೆ.ನಗರ ನಿವಾಸಿಗಳಾದ ಕಾರ್ತಿಕ್ ಕುಮಾರ್ (25), ರಾಕೇಶ್ ನಾಯ್ಡು (27) ಮತ್ತು ಕಾರ್ತಿಕ್ (26) ಬಂಧಿತರು. 8.60 ಲಕ್ಷ ರೂ. ಮೌಲ್ಯದ 8 ಕೆಜಿ 600 ಗ್ರಾಂ ಗಾಂಜಾ ಮತ್ತು ಕೃತ್ಯಕ್ಕೆ ಬಳಸಿದ್ದ ಆಟೋ ರಿಕ್ಷಾ ಜಪ್ತಿ ಮಾಡಲಾಗಿದೆ. ಟಾಟಾನಗರದ ಎನ್‌ಟಿಐ ಮೈದಾನದದಲ್ಲಿ ಅಪರಿಚಿತರು ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ನಡೆಸಿ ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net