

ಬೆಂಗಳೂರು: 2022-23ನೇ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ 83.89 % ಫಲಿತಾಂಶ ಸಾಧಿಸಿದೆ. ನಾಲ್ವರು ವಿದ್ಯಾರ್ಥಿಗಳು 625ಕ್ಕೆ 625 ಅಂಕ ಗಳಿಸಿ SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ಭೂಮಿಕಾ ಪೈ- ನ್ಯೂ ಮೆಕಾಲೆ ಶಾಲೆ, ಹೊಸೂರು ರಸ್ತೆ, ಬೆಂಗಳೂರು, ಯಶಸ್ಗೌಡ- ಬಿಜಿಎಸ್ ಶಾಲೆ, ಅಗಲಗುರ್ಕಿ, ಚಿಕ್ಕಬಳ್ಳಾಪುರ ಜಿಲ್ಲೆ, ಅನುಪಮಾ ಶ್ರೀಶೈಲ್ ಹಿರೆಹೋಳಿ- ಶ್ರೀಕುಮಾರೇಶ್ವರ ಶಾಲೆ,ಸವದತ್ತಿ, ಬೀಮನಗೌಡ ಪಾಟೀಲ್-ವಿಜಯಪುರ. ಈ ನಾಲ್ವರು ವಿದ್ಯಾರ್ಥಿಗಳು 625ಕ್ಕೆ 625 ಅಂಕ ಗಳಿಸಿ SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.
4 ವಿದ್ಯಾರ್ಥಿಗಳು ಔಟ್ ಆಫ್ ಔಟ್:
ಚಿತ್ರದುರ್ಗ ಜಿಲ್ಲೆಯಲ್ಲಿ ಶೇಕಡಾ 96.08ರಷ್ಟು ಫಲಿತಾಂಶ, ಈ ಬರಿ ಚಿತ್ರದುರ್ಗ ಜಿಲ್ಲೆಗೆ ಮೊದಲ ಸ್ಥಾನ. SSLC ಪರೀಕ್ಷೆ ಫಲಿತಾಂಶದಲ್ಲಿ ಮಂಡ್ಯ ಜಿಲ್ಲೆಗೆ ಎರಡನೇ ಸ್ಥಾನ ಹಾಗೂ ಹಾಸನ ಜಿಲ್ಲೆಗೆ 3ನೇ ಸ್ಥಾನದಲ್ಲಿವೆ.
ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಪಾಸಾದ ಬಾಲಕರು 3,41,108, ಬಾಲಕಿಯರ ಸಂಖ್ಯೆ 3,59,511, SSLC ಫಲಿತಾಂಶದಲ್ಲಿ A ಗ್ರೇಡ್ ಪಡೆದ ಜಿಲ್ಲೆಗಳು ಸಂಖ್ಯೆ-23, ಫಲಿತಾಂಶದಲ್ಲಿ ಬಿ ಗ್ರೇಡ್ ಪಡೆದ ಜಿಲ್ಲೆಗಳು ಸಂಖ್ಯೆ 12 ಪಟ್ಟಿ ಪ್ರಕಟವಾಗಿದೆ. ಕರ್ನಾಟಕ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ಸೈಟ್ karresults.nic.in ನಲ್ಲಿ ಎಸ್ಎಸ್ಎಲ್ಸಿ ಫಲಿತಾಂಶ ವೀಕ್ಷಿಸಬಹುದು.
ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಮೇ 15ರಿಂದ ಮೇ 21ರವರೆಗೆ ಮರುಮೌಲ್ಯಮಾಪನಕ್ಕೆ ಅವಕಾಶವಿದೆ. ಮರುಮೌಲ್ಯಮಾಪನ ಬಯಸುವ ವಿದ್ಯಾರ್ಥಿಗಳು ಪ್ರತಿ ವಿಷಯಕ್ಕೆ ರೂ. 250 ಪಾವತಿಸಬೇಕಿದೆ.
ಕರ್ನಾಟಕ SSLC ಫಲಿತಾಂಶ 2023 ರಲ್ಲಿ, ಹುಡುಗಿಯರು ಮತ್ತೊಮ್ಮೆ ಹುಡುಗರನ್ನು ಮೀರಿಸಿದ್ದಾರೆ. ಇತ್ತೀಚಿನ ಅಂಕಿಅಂಶಗಳ ಪ್ರಕಾರ, 87.87% ರಷ್ಟಿರುವ 359511 ಹುಡುಗಿಯರು KSEEB 10 ನೇ ತರಗತಿ ಪರೀಕ್ಷೆಯನ್ನು ತೇರ್ಗಡೆ ಹೊಂದಿದ್ದಾರೆ, ಆದರೆ 80.08% ರಷ್ಟಿರುವ 341108 ಹುಡುಗರು ಕರ್ನಾಟಕ 10 ನೇ ಬೋರ್ಡ್ ಪರೀಕ್ಷೆ 2023 ರಲ್ಲಿ ಉತ್ತೀರ್ಣರಾಗಿದ್ದಾರೆ.