ಅರಕಲಗೂಡು: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ನಗರ ಪ್ರದೇಶಗಳಂತೆಯೇ ಹಳ್ಳಿಗಾಡಿನ ವಿದ್ಯಾರ್ಥಿಗಳಿಗೂ ನೆರವಾಗುವ ಉದ್ದೇಶದಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲು ಆದ್ಯತೆ ನೀಡಿರುವುದು ಶ್ಲಾಘನೀಯ ಎಂದು ತಹಸೀಲ್ದಾರ್ ಕೆ.ಸಿ.ಸೌಮ್ಯಾ ಹೇಳಿದರು.
ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕಾರ್ಯಾಗಾರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಉನ್ನತ ಸಂಸ್ಥೆಗಳಿಂದ ಸಂಪನ್ನೂಲ ವ್ಯಕ್ತಿಗಳನ್ನು ಕರೆಸಿ ತರಬೇತಿ ನೀಡುವ ಮೂಲಕ ಉತ್ತಮ ಕಾರ್ಯ ನಡೆಸಲಾಗಿದೆ. ಇದರ ಪ್ರಯೋಜನ ಪಡೆದು ಉನ್ನತ ಸಾಧನೆ ಮಾಡುವಂತೆ ಸಲಹೆ ನೀಡಿದರಲ್ಲದೆ ಶಿಬಿರಾರ್ಥಿಗಳೊಂದಿಗೆ ಸಂವಾದ ನಡೆಸಿದರು.
ಪ್ರಾಂಶುಪಾಲ ಮಹೇಶ್, ಸಂಪನ್ಮೂಲ ವ್ಯಕ್ತಿ ಎ.ಸಿ.ಮಹೇಂದ್ರ, ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಎ.ಆರ್.ಬಾಲಾಜಿ, ಉದ್ಯೋಗ ಮಾಹಿತಿ ಕೋಶದ ಸಂಚಾಲಕಿ ಪಾರ್ವತಮ್ಮ, ಉಪನ್ಯಾಸಕರು ಪಾಲ್ಗೊಂಡಿದ್ದರು.
ಅರಕಲಗೂಡು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಏರ್ಪಡಿಸಿದ್ದ ಉಚಿತ ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ ಕಾರ್ಯಾಗಾರದ ಮುಕ್ತಾಯ ಸಮಾರಂಭದಲ್ಲಿ ರಸಪ್ರಶ್ನೆಯಲ್ಲಿ ವಿಜೇತರಾದ ಶಿಬಿರಾರ್ಥಿಗಳಿಗೆ ಬಹುಮಾನ ವಿತರಿಸಿದರು. ಕೆ.ಸಿ.ಸೌಮ್ಯಾ, ಮಹೇಶ್, ಮಹೇಂದ್ರ, ಬಾಲಾಜಿ ಇತರರಿದ್ದರು.