ಕಣ್ಣಿನ ಉಚಿತ ತಪಾಸಣಾ ಶಿಬಿರ

8 bannur 1
ಬನ್ನೂರಿನಲ್ಲಿ ಶನಿವಾರ ಉಚಿತ ಕಣ್ಣಿನ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ಡಾ.ಮಹೇಂದ್ರಸಿಂಗ್‌ಕಾಳಪ್ಪ, ಕೆ.ರಾಜೇಶ್‌ಕುಮಾರ್, ವೆಂಕಟೇಶ್, ರಾಜು, ಯೋಗೇಂದ್ರ, ವಿಜಯ್‌ಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿಸಿದ್ದರು.
Published on

ಬನ್ನೂರು: ಪಟ್ಟಣದ ರೋಟರಿ ಸಂಸ್ಥೆ, ಲಯನ್ಸ್ ಕ್ಲಬ್ ಆಫ್ ಈರೋಡ್ ಸುಪ್ರಿಮ್, ಕೊಯಮತ್ತೂರು ಕಣ್ಣಿನ ಆಸ್ಪತ್ರೆ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಶನಿವಾರ ಪಟ್ಟಣದಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ ಯಶಸ್ವಿಯಾಗಿ ನಡೆಯಿತು.

ರೋಟರಿ ಮಾಜಿ ಅಧ್ಯಕ್ಷ ಡಾ.ಮಹೇಂದ್ರಸಿಂಗ್ ಕಾಳಪ್ಪ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಗ್ರಾಮೀಣ ಪ್ರದೇಶದಲ್ಲಿ ದೃಷ್ಟಿ ಹೀನರ ಸಂಖ್ಯೆ ಅಧಿಕವಾಗಿದ್ದು, ಅವರಿಗೆ ಅನುಕೂಲವಾಗಲೆಂದು ಈ ಸೇವಾ ಕಾರ್ಯವನ್ನು ಮಾಡುತ್ತಾ ಬರುತ್ತಿದ್ದೇವೆ. ಉತ್ತಮ ಪ್ರತಿಕ್ರಿಯೆ ದೊರೆತಿದೆ. ಕಣ್ಣಿನ ಪೊರೆ, ಗ್ಲಾಕೋಮ, ನೀರು ಸೋರುವಿಕೆ, ಕಣ್ಣಿನಲ್ಲಿ ಗೀಜು ಬರುವುದು, ಹತ್ತಿರ ಮತ್ತು ದೂರ ದೃಷ್ಟಿದೋಷ, ಕಣ್ಣಿನಲ್ಲಿ ಬಿರುಕು ಉಂಟಾಗುವುದು, ವಾರೆ ಕಣ್ಣು, ರಾತ್ರಿ ಕುರುಡುತನಕ್ಕೆ ಚಿಕಿತ್ಸೆ ನೀಡಲಾಗುತ್ತದೆ ಎಂದರು.

ರೋಟರಿ ಅಧ್ಯಕ್ಷ ವೆಂಕಟೇಶ್, ಕಾರ್ಯದರ್ಶಿ ರಾಜು, ಯೋಗೇಂದ್ರ, ವಿಜಯ್‌ಕುಮಾರ್, ಸಂತೋಷ್‌ಕುಮಾರಿ, ವನ್ಯಾ, ವಿರಾಟ್, ಡಾ.ಯಸೀನ್ ಪಟೇಲ್, ಡಾ.ಚಿನ್ನಮಾಯಿ, ನಂಜುಂಡಸ್ವಾಮಿ, ಲೋಕೇಶ್, ಮಾನಸಾ, ಪಂಚಲಿಂಗೇಗೌಡ, ಕೆ.ರಾಜೇಶ್‌ಕುಮಾರ್ ಉಪಸ್ಥಿತರಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net