18ರಂದು ಆರೋಗ್ಯ ಉಚಿತ ತಪಾಸಣೆ ಶಿಬಿರ

Published on

ಸಿದ್ದಾಪುರ: ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ( ಎಸ್‌ಎನ್‌ಡಿಪಿ) ಹಾಗೂ ಕೆ.ವಿ.ಜಿ. ವೈಯಕ್ತಿಕ ಮತ್ತು ಆಯುರ್ವೇದ ಮಹಾವಿದ್ಯಾಲಯ ಆಸ್ಪತ್ರೆ ಇವರ ಸಹಯೋಗದಲ್ಲಿ ಮೇ 18ರಂದು ಆರೋಗ್ಯ ಉಚಿತ ತಪಾಸಣೆ ಶಿಬಿರವನ್ನು ಆಯೋಜಿಸಿರುವುದಾಗಿ ಎಸ್‌ಎನ್‌ಡಿಪಿ ಜಿಲ್ಲಾ ಅಧ್ಯಕ್ಷ ವಿ.ಕೆ.ಲೋಕೇಶ್ ತಿಳಿಸಿದ್ದಾರೆ.

ಕಣ್ಣು, ಕಿವಿ, ಗಂಟಲು, ಸ್ತ್ರೀರೋಗ, ಚರ್ಮ, ಲೈಂಗಿಕ ರೋಗ, ಮಕ್ಕಳ ವಿಭಾಗ, ಎಲುಬು, ಕೀಲು, ದಂತ ಸೇರಿದಂತೆ ಜನರಲ್ ಮೆಡಿಸಿನ್ ವಿಭಾಗದ ನುರಿತ ವೈದ್ಯರಿಂದ ಪರೀಕ್ಷೆ ಮತ್ತು ಉಚಿತ ಔಷಧ ವಿತರಣೆ ನಡೆಯಲಿದ್ದು ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಸಿದ್ದಾಪುರದ ಸ್ವರ್ಣಮಾಲ ಕಲ್ಯಾಣ ಮಂಟಪದಲ್ಲಿ ಬೆಳಗ್ಗೆ 9.30ಕ್ಕೆ ಮಾಜಿ ಶಾಸಕ ಕೆ.ಜಿ.ಬೋಪಯ್ಯ ಶಿಬಿರವನ್ನು ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಸುಳ್ಯದ ಕೆ.ವಿ.ಜಿ.ವೈದ್ಯಕೀಯ ಮಹಾವಿದ್ಯಾಲಯದ ನಿರ್ದೇಶಕ ಡಾ.ಕೆ.ವಿ.ಚಿದಾನಂದ, ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಹರಪಳ್ಳಿ ರವೀಂದ್ರ, ಡಾ.ಉದಯಕುಮಾರ್, ರಿಶಾ ಸುರೇಂದ್ರ, ರಾಜನ್, ಕೆ.ವಿ, ಪ್ರೇಮಾನಂದ ಉಪಸ್ಥಿತರಿರುವರು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net