ಶಾಸಕ ಜನ್ಮದಿನ ಪ್ರಯುಕ್ತ ಮೇ 7ಕ್ಕೆ ಉಚಿತ ಆರೋಗ್ಯ ತಪಾಸಣೆ

06 CRP-4A
ಪರಮ ದೇವರಾಜೇಗೌಡ
Published on

ಚನ್ನರಾಯಪಟ್ಟಣ: ಡಾ.ಸಿ.ಎನ್.ಬಾಲಕೃಷ್ಣ ಅಭಿಮಾನಿಗಳ ಸಂಘ ಹಾಗೂ ತಾಲೂಕು ಜೆಡಿಎಸ್ ಘಟಕದಿಂದ ಶಾಸಕ ಸಿ.ಎನ್.ಬಾಲಕೃಷ್ಣ ಅವರ 56ನೇ ಹುಟ್ಟುಹಬ್ಬದ ಪ್ರಯುಕ್ತ ಮೇ 7ರಂದು ಪಟ್ಟಣದ ಸರ್ಕಾರಿ ಮಾಧ್ಯಮಿಕ ಶಾಲಾ ಆವರಣದಲ್ಲಿ ಆರೋಗ್ಯ ಉಚಿತ ತಪಾಸಣೆ ಶಿಬಿರ, ರಕ್ತದಾನ ಶಿಬಿರ ಹಾಗೂ ಸಂಜೆ 6 ಗಂಟೆಗೆ ಶಾಸಕರಿಗೆ ಅಭಿನಂದನಾ ಸಮಾರಂಭ ಹಾಗೂ ಡೋಪ್ ಮಿರ್ಚಿ ಬೆಂಗಳೂರು ಇವರಿಂದ ಸಂಗೀತ ಸಂಜೆ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ತಾಲೂಕು ಜೆಡಿಎಸ್ ಅಧ್ಯಕ್ಷ ಪರಮ ದೇವರಾಜೇಗೌಡ ತಿಳಿಸಿದರು.

ತಾಲೂಕು ಆರೋಗ್ಯ ಇಲಾಖೆ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ತಾಲೂಕು ಘಟಕ ಹಾಗೂ ಲಯನ್ಸ್ ಕ್ಲಬ್ ಸನ್ ರೈಸ್ ಚನ್ನರಾಯಪಟ್ಟ ಮತ್ತು ಶ್ರೀ ಆದಿಚುಂಚನಗಿರಿ ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರ ಬಿ.ಜಿ.ಎಸ್. ನಗರ ಸಹಯೋಗದಲ್ಲಿ ಆರೋಗ್ಯ ಉಚಿತ ತಪಾಸಣೆ ನಡೆಯಲಿದೆ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಅಂದು ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಮೆಡಿಸನ್ ತಜ್ಞರು, ಶಸ್ತ್ರಚಿಕಿತ್ಸೆ ತಜ್ಞರು, ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರು, ಮಕ್ಕಳ ತಜ್ಞರು, ಚರ್ಮರೋಗ ತಜ್ಞರು, ಮನೋವೈದ್ಯರು, ವಿಕಿರಣ ಶಾಸ್ತ್ರಜ್ಞರು, ಮೂಳೆ ತಜ್ಞರು, ಕಿವಿ, ಮೂಗು, ಗಂಟಲು ತಜ್ಞರು, ನೇತ್ರ ತಜ್ಞರು, ಐಸಿಯು ತಜ್ಞರು, ಶ್ವಾಸಕೋಶ ತಜ್ಞರು, ಹೃದಯ, ನರಶಸ್ತ್ರ ಚಿಕಿತ್ಸೆ, ತಜ್ಞರಯ, ನರರೋಗ, ಮೂತ್ರಶಾಸ್ತ್ರ ತಜ್ಞರು ಶಿಬಿರದಲ್ಲಿ ಲಭ್ಯವಿದ್ದು ಸಂಬಂಧಪಟ್ಟ ಕಾಯಿಲೆಗಳಿಗೆ ಉಚಿತ ತಪಾಸಣೆ ಸೇರಿದಂತೆ ಚಿಕಿತ್ಸೆ ನೀಡಲಾಗುವುದು. ಬಿಪಿ ತಪಾಸಣೆ, ಶುಗರ್ ಪರೀಕ್ಷೆ, ಇಸಿಜಿ ತಪಾಸಣೆ ಮಾಡಲಾಗುವುದು. ತಾಲೂಕಿನ ಸಮಸ್ತ ಜನರು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.

ಅಂದು ಸಂಜೆ 6 ಗಂಟೆಯಿಂದ ಅಭಿನಂದನಾ ಸಮಾರಂಭ ಹಾಗೂ ಸಂಗೀತ ಸಂಜೆ ಕಾರ್ಯಕ್ರಮದಲ್ಲಿ ಶಾಸಕರಾದ ಎಚ್.ಡಿ.ರೇವಣ್ಣ, ಎ.ಮಂಜು, ಸ್ವರೂಪ್ ಪ್ರಕಾಶ್, ಎಚ್.ಟಿ.ಮಂಜು, ಎಚ್.ಕೆ.ಸುರೇಶ್, ಮಾಜಿ ಸಚಿವ ಎಚ್.ಕೆ.ಕುಮಾರಸ್ವಾಮಿ, ವಿಧಾನ ಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ, ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕರಾದ ಉಮಾಪತಿ, ರಘುಗೌಡ, ಜೆಡಿಎಸ್ ಯುವ ಮುಖಂಡ ನಿಖಿಲ್ ಕುಮಾರಸ್ವಾಮಿ, ಮಾಜಿ ಶಾಸಕ ಲಿಂಗೇಶ್, ಮುಖಂಡರಾದ ಎನ್.ಆರ್.ಸಂತೋಷ್ ಸೇರಿದಂತೆ ಜೆಡಿಎಸ್ ಮುಖಂಡರು ಭಾಗವಹಿಸಲಿದ್ದು ತಾಲೂಕಿನ ಸಮಸ್ತ ಜನತೆ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಅಭಿನಂದನಾ ಸಮಾರಂಭವನ್ನು ಯಶಸ್ವಿಗೊಳಿಸಬೇಕೆಂದು ವಿನಂತಿಸಿದರು.

ಸುದ್ದಿಗೋಷ್ಠಿಯಲ್ಲಿ ಟಿಎಪಿಸಿಎಂಎಸ್ ನ ಅಧ್ಯಕ್ಷ ಎಂ.ಆರ್.ಅನಿಲ್‌ಕುಮಾರ್, ಪುರಸಭಾ ಅಧ್ಯಕ್ಷ ಸಿ.ಎನ್.ಮೋಹನ್, ಸದಸ್ಯ ಯೋಗೇಶ್ ಸೇರಿದಂತೆ ಇತರರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net