ಬುದ್ಧಿಮಾಂದ್ಯ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ

Manjunath
ಸುದ್ದಿಗೋಷ್ಠಿಯಲ್ಲಿ ಎ.ಮಂಜುನಾಥ್ ಮಾತನಾಡಿದರು.
Published on

ಶಿವಮೊಗ್ಗ : ರೋಟರಿ ಕ್ಲಬ್ ಶಿವಮೊಗ್ಗ ಪ್ರಾಯೋಜಕತ್ವ ಹಾಗೂ ಅಂಗವಿಕಲರ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ ಮಾ.21 ಹಾಗೂ 22ರಂದು ನಗರದ ಆಶಾಕಿರಣ ಬುದ್ಧಿಮಾಂದ್ಯ ಮಕ್ಕಳ ವಸತಿ ಶಾಲೆಯಲ್ಲಿ ಬುದ್ಧಿಮಾಂದ್ಯ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ ಆಯೋಜಿಸಲಾಗಿದೆ ಎಂದು ಶಾಲೆ ಕಾರ್ಯದರ್ಶಿ ಎ.ಮಂಜುನಾಥ್ ತಿಳಿಸಿದರು.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 6ರಿಂದ 18 ವರ್ಷದೊಳಗಿನ ಮಕ್ಕಳು ಭಾಗವಹಿಸಬಹುದು. ಮಕ್ಕಳಿಗೆ ಕ್ರೀಡೆ, ಕರಕುಶಲ ಕಲೆ ಕಲಿಸಲಾಗುವುದು. ಸಂಗೀತ, ನೃತ್ಯ, ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ಹೇಳಿದರು. ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ನೀಡಲಾಗುವುದು. ಶಿಬಿರಾರ್ಥಿಗಳಿಗೆ ಉಚಿತವಾಗಿ ಊಟ, ಉಪಾಹಾರ, ವಸತಿ ವ್ಯವಸ್ಥೆ ಇರುತ್ತದೆ. ಮಾ.19ರೊಳಗೆ ಮೊ: 9448288487, 9844055287ಕ್ಕೆ ಕರೆಮಾಡಿ ನೋಂದಣಿ ಮಾಡಿಕೊಳ್ಳಬೇಕು ಎಂದು ತಿಳಿಸಿದರು. ಪ್ರಮುಖರಾದ ದೊರೈ, ಸೂರ್ಯನಾರಾಯಣ ಉಡುಪ, ಚಂದ್ರಪ್ಪ, ಗಿರೀಶ್, ಎಂ.ಚಂದ್ರಯ್ಯ ಸುದ್ದಿಗೋಷ್ಠಿಯಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net