

ಬೆಂಗಳೂರು : ಕರೊನಾ ಲಸಿಕಾ ಅಭಿಯಾನದ ಮುಂದಿನ ಹಂತದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಉಚಿತವಾಗಿ ಲಸಿಕೆ ನೀಡಲು ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಕೋವಿಡ್ ನಿಯಂತ್ರಣಕ್ಕಾಗಿ ಮೊದಲನೇ ಬಹಳ ದೊಡ್ಡ ನಿರ್ಧಾರ ಮಾಡಲಾಗಿದೆ. ಇದಕ್ಕಾಗಿ ಸರ್ಕಾರ 400 ಕೋಟಿ ರೂ. ಮೀಸಲಿರಿಸಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.
ಕರೊನಾ ನಿಯಂತ್ರಣದ ಬಗ್ಗೆ ಇಂದು ನಡೆದ ಸಚಿವ ಸಂಪುಟ ಸಭೆಯ ನಿರ್ಧಾರಗಳ ಬಗ್ಗೆ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಸಚಿವರು, ಲಸಿಕೆ ಮಾತ್ರ ಕೋವಿಡ್ಗೆ ರಾಮಬಾಣವಾಗಿದ್ದು, ಜನರಿಗೆ ಅದನ್ನು ಉಚಿತವಾಗಿ ಒದಗಿಸಬೇಕು ಎಂದು ಸಂಪುಟದ ಸಹೋದ್ಯೋಗಿಗಳ ಒಮ್ಮತದಿಂದ ನಿರ್ಧಾರ ಮಾಡಲಾಗಿದೆ. ಎಲ್ಲ ಸಚಿವರೂ ಕೂಡ ಇದನ್ನೇ ಹೇಳಿದ್ದಾರೆ ಎಂದರು.