ಎಲ್ಲಾ ನಿವಾಸಿಗಳಿಗೆ ಉಚಿತ ಕರೊನಾ ಲಸಿಕೆ : ಮಹಾರಾಷ್ಟ್ರ ಸಚಿವ

maha
Published on

ಮುಂಬೈ : ದೇಶದಲ್ಲಿ ಕರೊನಾದಿಂದ ಅತಿ ಹೆಚ್ಚು ಹಾನಿಗೊಳಗಾದ ರಾಜ್ಯವಾದ ಮಹಾರಾಷ್ಟ್ರವು ಕಳೆದ ಕೆಲವು ದಿನಗಳಿಂದ ದಿನಕ್ಕೆ 60,000 ಕ್ಕೂ ಹೆಚ್ಚು ಹೊಸ ಪ್ರಕರಣಗಳನ್ನು ವರದಿ ಮಾಡುತ್ತಿದೆ. ಈ ಸಂದರ್ಭದಲ್ಲಿ ರಾಜ್ಯದ ಎಲ್ಲಾ ನಿವಾಸಿಗಳಿಗೆ ಉಚಿತವಾಗಿ ಲಸಿಕೆ ನೀಡುವುದಾಗಿ ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಘೋಷಿಸಿದ್ದಾರೆ.

ಮೇ 1 ರಿಂದ 18 ವರ್ಷ ಮೇಲ್ಪಟ್ಟವರಿಗೆ ಕರೊನಾ ಲಸಿಕಾ ಅಭಿಯಾನವನ್ನು ಕೇಂದ್ರ ಸರ್ಕಾರ ವಿಸ್ತರಿಸಿದೆ. ಕೇಂದ್ರ ಸರ್ಕಾರವು ರಾಜ್ಯಗಳಿಗೆ ಉಚಿತವಾಗಿ ನೀಡುವ ಲಸಿಕೆಗಳೊಂದಿಗೆ ರಾಜ್ಯ ಸರ್ಕಾರಗಳು ಸ್ವತಃ ಉತ್ಪಾದಕರಿಂದ ನೇರವಾಗಿ ಲಸಿಕೆ ಖರೀದಿಸಲು ಅವಕಾಶ ಮಾಡಿಕೊಡಲಾಗಿದೆ.

ಉತ್ಪಾದಕರಿಂದ ಲಸಿಕೆಯನ್ನು ಖರೀದಿಸಿ ತನ್ನ ಜನರಿಗೆ ಉಚಿತವಾಗಿ ಲಸಿಕೆ ನೀಡುವ ನಿರ್ಧಾರಗಳನ್ನು ಈಗಾಗಲೇ ಉತ್ತರಾಖಂಡ್ ಮತ್ತು ಆಂಧ್ರ ಪ್ರದೇಶ ಸರ್ಕಾರಗಳು ಪ್ರಕಟಿಸಿದ್ದವು. ಇದೀಗ ಮಹಾರಾಷ್ಟ್ರ ಕೂಡ ಅದೇ ದಾರಿ ಅನುಸರಿಸುತ್ತಿದೆ. ಈ ಬಗ್ಗೆ ರಾಜ್ಯ ಸಚಿವ ಸಂಪುಟದಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದ ನವಾಬ್ ಮಲಿಕ್, ಲಸಿಕೆ ಖರೀದಿಗೆ ಜಾಗತಿಕ ಟೆಂಡರ್‌ಗಳನ್ನು ಕರೆಯಲಾಗುವುದು ಎಂದಿದ್ದಾರೆ. (ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net