ಮಲ್ಲಪ್ಪನಹಳ್ಳಿ ಗ್ರಾಮದಲ್ಲಿ ರೆಫ್ರಿಜರೇಟರ್ ಸ್ಫೋಟ

Oplus_16908288
Oplus_16908288
Published on

ಹೊಳೆನರಸೀಪುರ : ತಾಲೂಕಿನ ಮಲ್ಲಪ್ಪನಹಳ್ಳಿ ಗ್ರಾಮದ ನಿಂಗರಾಜು ಎಂಬವರ ಮನೆಯಲ್ಲಿ ಸೋಮವಾರ ಮಧ್ಯಾಹ್ನ ರೆಫ್ರಿಜರೇಟರ್ ಸ್ಫೋಟಗೊಂಡು ಕೆಲಕಾಲ ಗ್ರಾಮಸ್ಥರಲ್ಲಿ ಆತಂಕ ಉಂಟು ಮಾಡಿತ್ತು. ನಿಂಗರಾಜು ಅವರು ಕುಟುಂಬ ಸಮೇತ ಸಂಬಂಧಿಕರ ಮನೆಯ ಗೃಹಪ್ರವೇಶಕ್ಕೆ ತೆರಳಿದ್ದ ಸಂದರ್ಭ ದಲ್ಲಿ ರೆಫ್ರಿಜರೇಟರ್ ಸ್ಫೋಟಗೊಂಡ ಕಾರಣ ಮನೆ ಹೆಂಚುಗಳು ಹಾರಿಹೋಗಿವೆ.

ಅಕ್ಕಪಕ್ಕದ ಮನೆಯವರು ಹೆದರಿ ಅಗ್ನಿ ಶಾಮಕ ಠಾಣೆಗೆ ಕರೆ ಮಾಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದವರು ಬೆಂಕಿ ನಂದಿಸಿ, ಹೆಚ್ಚಿನ ಅನಾಹುತ ಘಟಿಸದಂತೆ ಕ್ರಮಕೈಗೊಂಡಿದ್ದಾರೆ. ಮನೆಯಲ್ಲಿದ್ದ ಹಲವು ವಸ್ತುಗಳು ಸುಟ್ಟು ಕರಕಲಾಗಿ ಚಲ್ಲಾಪಿಲ್ಲಿಯಾಗಿವೆ. ಈ ಸಂದರ್ಭ ಗ್ಯಾಸ್ ಸಿಲಿಂಡರ್ ಹಾಗೂ ವಿದ್ಯುತ್ ಲೈನ್‌ಗಳಿಗೆ ಹಾನಿಯಾಗಿಲ್ಲ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net