ಹಣ್ಣಿನ ಗಿಡ ನೆಡುವ ಕಾರ್ಯಕ್ರಮ

20ss1Rotory padadikarigalu
ಆಲೂರು ಸಿದ್ದಾಪುರ ರೋಟರಿ ಕ್ಲಬ್ ವತಿಯಿಂದ ವನಮಹೋತ್ಸವದ ಅಂಗವಾಗಿ ಆಲೂರು ಸಿದ್ದಾಪುರದ ಸುತ್ತಮುತ್ತಲಿನ ಜಾಗದಲ್ಲಿ ಹಣ್ಣಿನ ಗಿಡಗಳನ್ನು ನೆಡಲಾಯಿತು.
Published on

ಶನಿವಾರಸಂತೆ: ಸಮೀಪದ ಆಲೂರು ಸಿದ್ದಾಪುರ ರೋಟರಿ ಮಲ್ಲೇಶ್ವರ ಕ್ಲಬ್ ವತಿಯಿಂದ ವನಮಹೋತ್ಸವದ ಅಂಗವಾಗಿ ಹಣ್ಣಿನ ಗಿಡಗಳನ್ನು ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಆಲೂರು ಸಿದ್ದಾಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸುತ್ತಮುತ್ತಲಿನ ಜಾಗದಲ್ಲಿ ಹಲವು ಜಾತಿಯ ಹಣ್ಣಿನ ಗಿಡಗಳನ್ನು ನೆಡುವುದರ ಮೂಲಕ ವನಮಹೋತ್ಸವವನ್ನು ಆಚರಿಸಲಾಯಿತು.

ರೋಟರಿ ಕ್ಲಬ್ ಅಧ್ಯಕ್ಷ ನಾರಾಯಣಸ್ವಾಮಿ ಮಾತನಾಡಿ, ರೋಟರಿ ಸಂಸ್ಥೆ ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳುವುದರ ಜತೆಯಲ್ಲಿ ಸಮಾಜದಲ್ಲಿ ಜಾಗೃತಿ ಮೂಡಿಸುತ್ತದೆ. ಅರಣ್ಯ ಪರಿಸರದ ಬಗ್ಗೆ ಕಾಳಜಿಯನ್ನು ಹೊಂದಿರುವ ನಿಟ್ಟಿನಲ್ಲಿ ರೋಟರಿ ಸಂಸ್ಥೆ ಮೂಲಕ ವಿಶ್ವ ಪರಿಸರದ ದಿನ ಮತ್ತು ವನಮಹೋತ್ಸವದ ಅಂಗವಾಗಿ ಉಪಯುಕ್ತ ಗಿಡಗಳು ಸೇರಿದಂತೆ ಹಣ್ಣಿನ ಗಿಡಗಳನ್ನು ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಿದೆ ಎಂದು ಹೇಳಿದರು.

ರೋಟರಿ ಕ್ಲಬ್ ಕಾರ್ಯದರ್ಶಿ ಕಿರಣ್, ವಲಯ ಸೇನಾನಿ ಎ.ಎಸ್.ರಾಮಣ್ಣ, ಮುಂದಿನ ಸಾಲಿನ ಅಧ್ಯಕ್ಷ ಸಂಪತ್, ರೋಟರಿ ಸದಸ್ಯರಾದ ಎಚ್.ಇ.ತಮ್ಮಯ್ಯ, ಪ್ರಸನ್ನಕುಮಾರ್, ವೆಂಕಟೇಶ್, ವಿಜಯ್, ಜಿತೇಂದ್ರ, ಸತೀಶ್ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net