ಇಂಧನ ಸೋರಿಕೆ; ಶ್ರೀನಗರಕ್ಕೆ ಹೊರಟಿದ್ದ ಇಂಡಿಗೋ ವಿಮಾನ ವಾರಾಣಸಿಯಲ್ಲಿ ತುರ್ತು ಭೂಸ್ಪರ್ಶ| IndiGo Flight

ವಿಜಯವಾಣಿ (95)
Published on

ವಾರಾಣಸಿ: ಕೋಲ್ಕತ್ತಾದಿಂದ ಶ್ರೀನಗರಕ್ಕೆ ಹೊರಟಿದ್ದ ಇಂಡಿಗೋ ವಿಮಾನವು(IndiGo Flight) ಇಂಧನ ಸೋರಿಕೆಯಿಂದಾಗಿ ಉತ್ತರ ಪ್ರದೇಶದ ವಾರಣಾಸಿಯಲ್ಲಿರುವ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ಬುಧವಾರ(ಅ. 22) ವರದಿಯಾಗಿದೆ.

ವಿಮಾನದಲ್ಲಿದ್ದ ಎಲ್ಲಾ 166 ಪ್ರಯಾಣಿಕರು ಮತ್ತು ವಿಮಾನಯಾನ ಸಂಸ್ಥೆ ಸುರಕ್ಷತವಾಗಿದ್ದಾರೆ. ಇನ್ನು ಘಟನೆ ವಿಮಾನ ನಿಲ್ದಾಣದ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಪರಿಸ್ಥಿತಿ ನಿಯಂತ್ರಣದಲ್ಲಿದೆ ಮತ್ತು ಸಾಮಾನ್ಯ ಕಾರ್ಯಾಚರಣೆಗಳು ಪುನರಾರಂಭಗೊಂಡಿವೆ ಎಂದು ವಾರಾಣಸಿ ಪೊಲೀಸರು ತಿಳಿಸಿದ್ದಾರೆ. (ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net