ರೇಣುಕಾಂಬೆ ಸನ್ನಿಧಿಯಲ್ಲಿ ಹುಣ್ಣಿಮೆ ಪೂಜೆ

chandragutti (3)
ಹುಣ್ಣಿಮೆ ನಿಮಿತ್ತ ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಸ್ಥಾನಕ್ಕೆ ಆಗಮಿಸಿದ್ದ ಭಕ್ತರು.
Published on

ಸೊರಬ: ಆಗಿ ಹುಣ್ಣಿಮೆ ನಿಮಿತ್ತ ಚಂದ್ರಗುತ್ತಿ ಶ್ರೀ ರೇಣುಕಾಂಬಾ ದೇವಸ್ಥಾನಕ್ಕೆ ಸೋಮವಾರ ಸಾವಿರಾರು ಭಕ್ತರು ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು. ದೇವಸ್ಥಾನದ ಆವರಣದಲ್ಲಿರುವ ಪರಿವಾರ ದೇವರುಗಳಾದ ಕಾಲಬೈರವ, ನಾಗದೇವತೆ, ಮಾತಂಗಿ, ಪರಶುರಾಮ, ತ್ರಿಶೂಲದ ಬೈರಪ್ಪ ದೇವರಿಗೆ ಹಾಗೂ ತೊಟ್ಟಿಲು ಬಾವಿಗೆ ಪೂಜೆ ನೆರವೇರಿಸಿದರು. ಸ್ಥಳದಲ್ಲೇ ಒಲೆ ಹೂಡಿ ಕರಿದ ಹೋಳಿಗೆ, ರೊಟ್ಟಿ, ಬುತ್ತಿ ತಯಾರಿಸಿ ದೇವಿಗೆ ನೈವೇದ್ಯ ಅರ್ಪಿಸಿದರು. ಬ್ಯಾಡಗಿ, ರಾಣೆಬೆನ್ನೂರು, ಹರಿಹರ, ಶಿಕಾರಿಪುರ, ಹಾನಗಲ್, ವಿಜಯಪುರ, ಚಿತ್ರದುರ್ಗ ಮುಂತಾದೆಡೆಯಿಂದ ಭಕ್ತರು ಆಗಮಿಸಿ ದೇವಿಯ ದರ್ಶನ ಪಡೆದರು. ನಂತರ ಗ್ರಾಮದಲ್ಲಿ ಶ್ರೀ ರೇಣುಕಾಂಬಾ ದೇವಿ ಪಲ್ಲಕ್ಕಿ ಉತ್ಸವ ವಾದ್ಯ ಮೇಳಗಳೊಂದಿಗೆ ನಡೆಯಿತು. ಪಲ್ಲಕ್ಕಿ ಉತ್ಸವಕ್ಕೆ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಪ್ರಮೀಳಾಕುಮಾರಿ ಚಾಲನೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net