ವಿಧಾನ ಪರಿಷತ್​ ಮಾಜಿ ಸದಸ್ಯ ಜಿ.ಮಾದಪ್ಪ ನಿಧನ; ಶಿವಮೊಗ್ಗದ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ, ನಾಳೆ ಅಂತ್ಯಕ್ರಿಯೆ

MLC 5 Feb 20
Published on

ಶಿವಮೊಗ್ಗ: ಸ್ವಾತಂತ್ರ್ಯ ಹೋರಾಟಗಾರ, ಜೆಡಿಎಸ್​ ಹಿರಿಯ ಮುಖಂಡ, ವಿಧಾನ ಪರಿಷತ್ ಮಾಜಿ ಸದಸ್ಯ ಜಿ.ಮಾದಪ್ಪ (87)ನಿಧನರಾಗಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲೇ ನಿಧನರಾಗಿದ್ದಾರೆ.

ಜಿ.ಮಾದಪ್ಪ ಜೆಡಿಎಸ್ ಪಕ್ಷದಲ್ಲಿ ವಿವಿಧ ಜವಾಬ್ದಾರಿಗಳನ್ನು ನಿಭಾಯಿಸಿದ್ದರು. ಇಂದು ಮಧ್ಯಾಹ್ನ 2ಗಂಟೆಯಿಂದ ನಾಳೆ ಬೆಳಗ್ಗೆ 10 ಗಂಟೆಯವರೆಗೆ ಗಾಂಧಿನಗರದಲ್ಲಿರುವ ಮಾದಪ್ಪನವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net