

ನವದೆಹಲಿ: ಭಾರತದ ಅಧ್ಯಕ್ಷತೆಯಲ್ಲಿ ಜಗತ್ತಿನ ವಿವಿಧ ದೇಶಗಳ ಪ್ರಮುಖ ಗಣ್ಯರ ಉಪಸ್ಥಿತಿಯಲ್ಲಿ ನವದೆಹಲಿಯ ಭಾರತ ಮಂಟಪದಲ್ಲಿ ನಿನ್ನೆಯಿಂದ ಎರಡು ದಿನಗಳ ಕಾಲ ಹಮ್ಮಿಕೊಳ್ಳಲಾಗಿದ್ದ ಜಿ-20 ಶೃಂಗಸಭೆ ಅದ್ಧೂರಿಯಾಗಿ ನೆರವೇರಿದ್ದು, ಇದೀಗ ಮುಕ್ತಾಯಗೊಂಡಿದೆ.
ಮುಂದಿನ ಜಿ-20 ಶೃಂಗಸಭೆ ಬ್ರೆಜಿಲ್ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಹೀಗಾಗಿ ಪ್ರಸ್ತುತ ಸಭೆಯ ಅಧ್ಯಕ್ಷತೆ ವಹಿಸಿದ್ದ ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಜಿ-20 ಶೃಂಗಸಭೆಯ ಗವೆಲ್ ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಇನಾಸಿಯೊ ಲೂಲಾ ಡ ಸಿಲ್ವಾ ಅವರಿಗೆ ಹಸ್ತಾಂತರ ಮಾಡಿದರು.
ನಾವು ನಿನ್ನೆ ವಿವಿಧ ವಿಷಯಗಳ ಕುರಿತು ವ್ಯಾಪಕ ಮಾತುಕತೆ ನಡೆಸಿದೆವು. ಒಂದು ಭೂಮಿ, ಒಂದು ಕುಟುಂಬ ಧ್ಯೇಯದಲ್ಲಿ ಈ ಸಭೆಗಳು ನಡೆದಿವೆ. ಒಂದು ಭೂಮಿ, ಒಂದು ಕುಟುಂಬ, ಒಂದು ಭವಿಷ್ಯ ಎಂಬ ಉದ್ದೇಶದ ಕಾರ್ಯಗಳಿಗೆ ಈ ಜಿ-20 ವೇದಿಕೆಯಾಗಿದೆ ಎಂಬ ಸಂತೃಪ್ತಿ ನನಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.