ಸಿದ್ದರಾಮಯ್ಯ ನೋಡಲು ಮುಗಿಬಿದ್ದ ಅಭಿಮಾನಿಗಳಿಗೆ ಲಾಠಿ ರುಚಿ ತೋರಿಸಿದ ಪೊಲೀಸರು

Lati Charge
Published on

ಗದಗ: ಮಾಜಿ ಸಿಎಂ ಸಿದ್ದರಾಮಯ್ಯ ಶಿರಹಟ್ಟಿ ವಿಧಾನಸಭಾ ಕ್ಷೇತ್ರದಲ್ಲಿ ಮತಬೇಟೆಗೆ ಧುಮುಕಿದ್ದಾರೆ. ಪ್ರಚಾರಕ್ಕಾಗಿ ತಾಲೂಕಿನ ಬೆಳ್ಳಟ್ಟಿ ಗ್ರಾಮಕ್ಕೆ ಆಗಮಿಸಿದ ಸಿದ್ದರಾಮಯ್ಯ ಅವರನ್ನು ನೋಡಲು ಭಾರೀ ಸಂಖ್ಯೆಯಲ್ಲಿ ಅಭಿಮಾನಿಗಳು ಆಗಮಿಸಿದ್ದರು.

ಸಾಕಷ್ಟು ಸಂಖ್ಯೆಯಲ್ಲಿ ನೆರೆದಿದ್ದ ಅಭಿಮಾನಿಗಳು

ವಿಶೇಷ ಹೆಲಿಕಾಪ್ಟರ್ ಮೂಲಕ ತಾಲೂಕಿನ ಆಗಮಿಸಿದ ಸಿದ್ದರಾಮಯ್ಯ ಅವರನ್ನು ನೋಡಲು ಸಾಕಷ್ಟು ಸಂಖ್ಯೆಯಲ್ಲಿ ಅಭಿಮಾನಿಗಳು ನೆರದಿದ್ದರು. ಮಾಜಿ ಸಿಎಂ ಹೆಲಿಕಾಪ್ಟರ್​ನಿಂದ ಕೆಳಗಿಳಿಯುತ್ತಿದ್ದಂತೆ ಜನರು ಹಾಗೂ ಅಭಿಮಾನಿಗಳು ಮುಗಿಬಿದ್ದಿದ್ದಾರೆ.

ಸಿಆರ್​​ಪಿಎಫ್ ಪೊಲೀಸರಿಂದ ಲಾಠಿ ಚಾರ್ಜ್

ಜನರು ಹಾಗೂ ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ. ಕೊನೆಗೆ ಲಘು ಲಾಠಿ ಪ್ರಹಾರ ನಡೆಸುವ ಮೂಲಕ ಪೊಲೀಸರು ಜನರನ್ನು ಚದುರಿಸಿದ್ದಾರೆ. ಸಿಆರ್​ಪಿಎಫ್ ಹಾಗೂ ಸ್ಥಳೀಯ ಪೊಲೀಸರು ಲಾಠಿ ಚಾರ್ಚ್ ನಡೆಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net