ಅನಿಷ್ಟ ಪದ್ಧತಿಗಳ ವಿರುದ್ಧ ಹೋರಾಡಿದ್ದ ಸಾವಿತ್ರಿ ಬಾಯಿ ಫುಲೆ - ಡಾ. ಗಂಗೂಬಾಯಿ ಪವಾರ.

IMG-20250104-WA0044
Published on
ಗದಗ: ನಗರದ ಶತಮಾನ ಪೂರೈಸಿದ ಹಾಗೂ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪ್ರತಿಷ್ಠಿತ ವಿದ್ಯಾದಾನ ಸಮಿತಿಯ ಶ್ರೀಮತಿ ಎಂ. ಬಿ. ಹುಯಿಲಗೋಳ ಶಿಕ್ಷಣ ಮಹಾವಿದ್ಯಾಲಯದಲ್ಲಿ ದಿನಾಂಕ: 03-01-2025 ರಂದು ದೇಶದ ಪ್ರಥಮ ಮಹಿಳಾ ಶಿಕ್ಷಕಿ, ಅಕ್ಷರದವ್ವ ಸಾವಿತ್ರಿ ಬಾಯಿ ಫುಲೆ ಅವರ ಜನ್ಮದಿನವನ್ನು ಆಚರಿಸಲಾಯಿತು.
ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ಗಂಗೂಬಾಯಿ ಪವಾರ ರವರು ಸಾವಿತ್ರಿ ಬಾಯಿ ಫುಲೆ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಪೂಜೆ ಸಲ್ಲಿಸಿ ಶಿಕ್ಷಣವು ಜಗತ್ತನ್ನು ಬದಲಾಯಿಸಲು ನೀವು ಬಳಸಬಹುದಾದ ಅತ್ಯಂತ ಶಕ್ತಿಶಾಲಿ ಅಸ್ತ್ರವಾಗಿದೆ. ಹೆಣ್ಣುಮಕ್ಕಳಿಗೆ ವಿದ್ಯೆಯನ್ನು ನಿರಾಕರಿಸಿದ್ದ ಸಮಾಜಕ್ಕೆ ಎದುರಾಗಿ ನೋವು-ಅಪಮಾನಗಳನ್ನು ಮೆಟ್ಟಿನಿಂತು ಎಲ್ಲಾ ವರ್ಗಗಳ ಹೆಣ್ಣು ಮಕ್ಕಳಿಗೆ ಶಾಲೆ ಪ್ರಾರಂಭಿಸಿ ಅಕ್ಷರ ಕಲಿಸಿದ ದಿಟ್ಟ ಮಹಿಳೆ, ಅಕ್ಷರದವ್ವ ಹಾಗೂ ದೇಶದ ಪ್ರಥಮ ಶಿಕ್ಷಕಿ ಎನಿಸಿಕೊಂಡರು. ಸಮಾಜದ ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಭದ್ರ ಬುನಾದಿ ಹಾಕಿದ ಸಾವಿತ್ರಿ ಬಾಯಿ ಫುಲೆ ಅವರು ಸಮಸ್ತ ಸ್ತ್ರೀ ಕುಲಕ್ಕೆ ಸ್ಫೂರ್ತಿ ಎಂದು ಪ್ರಶಿಕ್ಷಣಾರ್ಥಿಗಳಿಗೆ ತಿಳಿಸಿಕೊಟ್ಟರು.
ಈ ಸಂದರ್ಭದಲ್ಲಿ ದೇಶದ ಮೊದಲ ಶಿಕ್ಷಕಿ, ಆಗಿನ ಕಾಲದಲ್ಲಿ ಇಡಿ ಸಮಾಜವನ್ನು ಎದುರಾಗಿಸಿಕೊಂಡು ಸ್ತ್ರೀಯರ ಹಕ್ಕುಗಳ ರಕ್ಷಣೆಗಾಗಿ ಹೆಣ್ಣು ಮಕ್ಕಳಿಗೆ ಶಿಕ್ಷಣ ಅಗತ್ಯ ಅಂತ ಅರಿತು ಎಲ್ಲಾ ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ ಹೊರಾಡಿದ ಮಹಾನ ಮಾತೆ ಸಾವಿತ್ರಿ ಬಾಯಿ ಫುಲೆ ಅವರ ಕುರಿತು ಪ್ರಶಿಕ್ಷಣಾರ್ಥಿಗಳಾದ ಕು. ಬೃಂದಾ, ಕು. ಮೇಘನಾ ಮತ್ತು ಕು. ಬಸವರಾಜ ಭಾಷಣ ಮಾಡಿದರು.
ಪ್ರಶಿಕ್ಷಣಾರ್ಥಿಯಾದ ಬಸವರಾಜ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು. ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಉಪನ್ಯಾಸಕರಾದ ಶ್ರೀ ವಿ. ಪಿ. ಪಾಟೀಲ, ಶ್ರೀ ಎನ್. ಜಿ. ಚನ್ನಪ್ಪಗೌಡ್ರ, ಶ್ರೀ ಬಸವರಾಜ ಕರಬಿಷ್ಠಿ, ಶ್ರೀ ಶಶಿಧರ ಹೊಸಳ್ಳಿ, ಶ್ರೀ ಎಸ್. ವಾಯ್. ಕಠಾರಿ ಮತ್ತು ಮಹಾವಿದ್ಯಾಲಯದ ಎಲ್ಲಾ ಪ್ರಶಿಕ್ಷಣಾರ್ಥಿಗಳು ಪಾಲ್ಗೊಂಡಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net