ಸಂಸ್ಕೃತಿ ಪರಿಪಾಲನೆಯಿಂದ ಗೌರವ ಪ್ರಾಪ್ತಿ

njr
ನಗರಸಭೆ ಮಾಜಿ ಅಧ್ಯಕ್ಷ ಎನ್.ಜೆ.ರಾಜಶೇಖರ್ ಶಿವಗಣಾರಾಧನಾ ಶ್ರದ್ಧಾಂಜಲಿ ಸಮಾರಂಭದಲ್ಲಿ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರು, ಬಿಳಕಿ ಹಿರೇಮಠದ ರಾಚೋಟೇಶ್ವರ ಶಿವಾಚಾರ್ಯರು, ಬಿ.ವೈ.ರಾಘವೇಂದ್ರ, ಎಸ್.ಎನ್.ಚನ್ನಬಸಪ್ಪ, ಮಾಜಿ ಸಂಸದ ಆಯನೂರು ಮಂಜುನಾಥ್ ಮುಂತಾದವರು ಪಾಲ್ಗೊಂಡಿದ್ದರು.
Published on

ಶಿವಮೊಗ್ಗ:ಜೀವ ಇದ್ದಾಗ ಮಾತ್ರ ಕಾಯಕ್ಕೆ ಬೆಲೆ. ಜೀವದಲ್ಲಿನ ಉಸಿರು ನಿಂತಾಗ ಕಾಯಕ್ಕೆ ಬೆಲೆ ಸಿಗದು. ಹುಟ್ಟು ಎಷ್ಟು ಸಹಜವೋ ಮೃತ್ಯು ಅಷ್ಟೇ ಸತ್ಯ. ಹುಟ್ಟು-ಸಾವುಗಳ ಮಧ್ಯದ ಬದುಕು ಶ್ರೀಮಂತಗೊಳ್ಳಬೇಕು. ಸತ್ಕಾರ್ಯ, ಸಂಸ್ಕೃತಿಯ ಪರಿಪಾಲನೆಯಿಂದ ಮಾತ್ರ ಗೌರವ ಪ್ರಾಪ್ತವಾಗಲು ಸಾಧ್ಯ ಎಂದು ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರು ಅಭಿಪ್ರಾಯಪಟ್ಟರು.

ಮಂಗಳವಾರ ನಗರದ ವೀರಶೈವ ಸಾಂಸ್ಕೃತಿಕ ಸಭಾ ಭವನದಲ್ಲಿ ಏರ್ಪಡಿಸಿದ್ದ ಮಾಜಿ ನಗರಸಭಾಧ್ಯಕ್ಷ ಎನ್.ಜೆ.ರಾಜಶೇಖರ್ ಶಿವಗಣಾರಾಧನಾ ಶ್ರದ್ಧಾಂಜಲಿ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದ ಶ್ರೀಗಳು, ರಾಜಶೇಖರ್ ಜನಾನುರಾಗಿ ವ್ಯಕ್ತಿತ್ವ ಗಳಿಸಿಕೊಂಡವರು. ನೊಂದವರ, ಬೆಂದವರ ಧ್ವನಿಯಾಗಿ ಎಲ್ಲರೊಂದಿಗೆ ಬೆರೆತು ಬಾಳಿದ ಆದರ್ಶ ವ್ಯಕ್ತಿ. ಅವರ ಆದರ್ಶ ಚಿಂತನೆಗಳು ಯುವ ಜನಾಂಗದಲ್ಲಿ ಬೆಳೆದು ಬರಲಿ ಎಂದು ಆಶಿಸಿದರು.

ಎಡೆಯೂರು ರೇಣುಕ ಶಿವಾಚಾರ್ಯರು, ಬಿಳಕಿ ಹಿರೇಮಠದ ರಾಚೋಟೇಶ್ವರ ಶಿವಾಚಾರ್ಯರು, ಹಾರನಹಳ್ಳಿ ಶಿವಯೋಗಿ ಶಿವಾಚಾರ್ಯರು, ಮಳಲಿಮಠದ ಡಾ.ನಾಗಭೂಷಣ ಶಿವಾಚಾರ್ಯರು, ಹೊನ್ನಾಳಿ ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯರು, ತಾವರೆಕೆರೆ ಡಾ.ಅಭಿನವ ಸಿದ್ಧಲಿಂಗ ಶಿವಾಚಾರ್ಯರು ಉಪಸ್ಥಿತರಿದ್ದರು. ನಂಜಪ್ಪ ಸಮೂಹ ಆಸ್ಪತ್ರೆಗಳ ಅಧ್ಯಕ್ಷ ಡಾ.ಬೆನಕಪ್ಪ ಅಧ್ಯಕ್ಷತೆ ವಹಿಸಿದ್ದರು.

ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ಶಾಸಕ ಎಸ್.ಎನ್.ಚನ್ನಬಸಪ್ಪ, ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ, ಮಾಜಿ ಸಂಸದ ಆಯನೂರ ಮಂಜುನಾಥ್, ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್, ವಿಧಾನ ಪರಿಷತ್ ಮಾಜಿ ಸದಸ್ಯರಾದ ಎಸ್.ರುದ್ರೇಗೌಡ, ಆರ್.ಕೆ.ಸಿದ್ದರಾಮಣ್ಣ, ಪ್ರಮುಖರಾದ ಎಸ್.ಎಸ್.ಜ್ಯೋತಿಪ್ರಕಾಶ್ ಮುಂತಾದವರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net