ಚೊಕ್ಕಾಪುರ ಚೌಡೇಶ್ವರಿ ದೇವಸ್ಥಾನದ ಗಣಪತಿ ವಿಸರ್ಜನೆ

biriur ganapa
ಬೀರೂರಿನ ಮಾರ್ಗದ ಕ್ಯಾಂಪ್‌ನ ಚೊಕ್ಕಾಪುರದ ಚೌಡೇಶ್ವರಿ ದೇವಸ್ಥಾನದ ಆವರಣದಲ್ಲಿ ಪ್ರತಿಷ್ಠಾಪಿಸಿದ್ದ ಗಣಪತಿಯನ್ನು ಬಾಕಿನಕೆರೆಯಲ್ಲಿ ವಿಸರ್ಜಿಸಲಾಯಿತು.
Published on

ಬೀರೂರು: ಮಾರ್ಗದ ಕ್ಯಾಂಪ್‌ನ ಚೊಕ್ಕಾಪುರದ ಚೌಡೇಶ್ವರಿ ದೇವಸ್ಥಾನದ ಆವರಣದಲ್ಲಿ ಪ್ರತಿಷ್ಠಾಪಿಸಿದ್ದ ಗಣಪತಿಯನ್ನು ಬುಧವಾರ ವಿಜೃಂಭಣೆಯ ಮೆರವಣಿಗೆ ನಡೆಸಿ ವಿಸರ್ಜನೆ ಮಾಡಲಾಯಿತು. ಸತತ 17 ದಿನಗಳವರೆಗೆ ದಿನನಿತ್ಯ ಪೂಜೆ, ಗಣಪತಿ ಹೋಮ, ವಿಶೇಷ ಅಲಂಕಾರ, ಭಜನೆ, ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಿದವು. ಸೋಮವಾರ ಅನ್ನಸಂತರ್ಪಣೆ ನಡೆಯಿತು. ಬುಧವಾರ ಪುಷ್ಪಾಲಂಕಾರ ಹಾಗೂ ವಿದ್ಯುತ್‌ದೀಪಗಳಿಂದ ಅಲಂಕಾರ ಮಾಡಿದ ಮಂಟಪದಲ್ಲಿ ಗಣಪತಿ ಪ್ರತಿಷ್ಠಾಪಿಸಿ ಪಟ್ಟಣದ ರಾಜಬೀದಿಗಳಲ್ಲಿ ಮೆರವಣಿಗೆ ಮೂಲಕ ಸಾಗಿತು. ಮಹಾತ್ಮ ಗಾಂಧಿ ವೃತ್ತದಲ್ಲಿ ಪಟಾಕಿಗಳನ್ನು ಸಿಡಿಸಿ ಸಂಭ್ರಮಿಸಿದರು. ಮಹಿಳೆಯರು ಮತ್ತು ಯುವಕರು ಡಿಜೆ ಶಬ್ದಕ್ಕೆ ಹೆಜ್ಜೆ ಹಾಕಿದರು. ಸಮೀಪದ ಬಾಕಿನಕೆರೆಗೆ ಗಣಪತಿ ವಿಸರ್ಜಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net