ಜಿಲ್ಲಾ ಕೇಂದ್ರಗಳ ಗಾಂಧಿ ಭವನ ಸಕ್ರಿಯ: ಸಿಎಂ ಸಿದ್ದರಾಮಯ್ಯ

CM Gandhi bhavan
Published on

ಬೆಂಗಳೂರು: ನಾನು ಮೊದಲ ಬಾರಿ ಮುಖ್ಯಮಾಂತ್ರಿಯಾಗಿದ್ದ ಅವಧಿಯಲ್ಲಿ ಪ್ರತಿ ಜಿಲ್ಲೆಯಲ್ಲಿ ಗಾಂಧಿ ಭವನ ನಿರ್ಮಾಣಕ್ಕೆ 90 ಕೋಟಿ ರೂ. ಬಿಡುಗಡೆ ಮಾಡಲಾಗಿತ್ತು. ಜಾಗ ಸಿಗದೆ ಕೆಲವೆಡೆ ಕಟ್ಟಡ ನಿರ್ಮಾಣ ಮಾಡಲು ಸಾಧ್ಯವಾಗಿಲ್ಲ. ಅಂತಹ ಕಡೆ ಕಟ್ಟಡ ನಿರ್ಮಿಸಲಾಗುತ್ತದೆ. ಹಾಗೆಯೇ ಹೊಸ ಬೇಡಿಕೆಯಂತೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಮಿತಿ ರಚಿಸುವುದು ಮತ್ತು ಗಾಂಧಿ ಭವನಗಳನ್ನು ಸಕ್ರಿಯವಾಗಿ ಕಾರ್ಯ ನಿರ್ವಹಿಸಲು ಬೇಕಾದ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು.

ಕರ್ನಾಟಕ ಗಾಂಧೀ ಸ್ಮಾರಕ ನಿಧಿಯು ಗಾಂಧಿ ಭವನದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಮಹಾತ್ಮ ಗಾಂಧೀಜಿ ಅವರ 155ನೇ ಜನ್ಮಜಯಂತಿ ವಿಶ್ವ ಅಹಿಂಸಾ ದಿನಾಚರಣೆಗೆ ಚಾಲನೆ ನೀಡಿ ಅವರು ಮಾತನಾಡಿದರು.

ಇದಕ್ಕೂ ಮೊದಲು ಮಾತನಾಡಿದ ಗಾಂಧೀ ಸ್ಮಾರಕ ನಿಧಿ ಅಧ್ಯಕ್ಷ ಡಾ. ವೂಡೇ ಪಿ. ಕೃಷ್ಣ ಅವರು ಗಾಂಧಿ ಭವನಗಳನ್ನು ಸಕ್ರಿಯಗೊಳಿಸುವಂತೆ ಮನವಿ ಮಾಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net