

ಕಾರವಾರ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಗಾಂಧಿ ಜಯಂತಿಯ ಅಂಗವಾಗಿ ಬುಧವಾರ ವಿವಿಧ ಕಾರ್ಯಕ್ರಮಗಳು ನಡೆದವು.
ನಗರಸಭೆ ಉದ್ಯಾನದ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಜಿಲ್ಲಾ ಪ್ರಧಾನ ಮತ್ತು ಸೆನ್ಶನ್ಸ್ ನ್ಯಾಯಾಧೀಶ ಡಿ.ಎಸ್.ವಿಜಯಕುಮಾರ್ ಅವರು ಚಾಲನೆ ನೀಡಿದರು. ನಂತರ ಸ್ವಚ್ಛತಾ ಕಾರ್ಯಕ್ರಮ ನಡೆಸಲಾಯಿತು.
ತ್ಯಾಜ್ಯದಿಂದ ಕಲೆ ಎಂಬ ಪರಿಕಲ್ಪನೆಯಲ್ಲಿ ಕಾಲೇಜ್ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಸ್ಪರ್ಧೆಯ ವಿಜೇತರಿಗೆ ವಕೀಲರ ಸಂಘದ ಸಭಾಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಿದರು. ನ್ಯಾಯಾಲಯದ ಆವರಣವನ್ನು ಸ್ವಚ್ಛ ಮಾಡುವವರನ್ನು ಗೌರವಿಸಲಾಯಿತು.
ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಧಿಶ ಮಾಯಣ್ಣ ಬಿ.ಎಲ್.,ಮಕ್ಕಳ ವಿಶೇಷ ನ್ಯಾಯಾಲಯದ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಧೀಶೆ ಪ್ರತಿಭಾ ಕುಲಕರ್ಣಿ, ಪ್ರಧಾನ ಸಿವಿಲ್ ನ್ಯಾಯಾಧೀಶೆ ರೇಷ್ಮಾ ಜೆ.ರೋಡ್ರಿಗಸ್, ಹಿರಿಯ ಸಿವಿಲ್ ನ್ಯಾಯಾಧೀಶರಾದ ಗಣೇಶ್ ಪಡಿಯಾರ ಯು., ದಿವ್ಯಶ್ರೀ ಸಿ.ಎಂ., ಪ್ರಧಾನ ಸಿವಿಲ್ ನ್ಯಾಯಾಧೀಶ ಧನುರಾಜ್ ಎಸ್.ಎಂ. ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ಅಕ್ಷತಾ ಸಿ.ಆರ್. ವಕೀಲರ ಸಂಘದ ಅಧ್ಯಕ್ಷ ಕೆ.ಬಿ. ನಾಯ್ಕ್, ಹಿರಿಯ ವಕೀಲರಾದ ಪಿ.ಎಂ. ನಾಯ್ಕ, ಇದ್ದರು. ನ್ಯಾಯಾಲಯದ ಸಿಬ್ಬಂದಿ ವಿಜಯಕುಮಾರ್ ಹಂಚಿನ ಮನೆ ಕಾರ್ಯಕ್ರಮ ನಿರೂಪಿಸಿದರು, ಪ್ರಾಧಿಕಾರದ ಸಿಬ್ಬಂದಿ ನರೇಶ್ ಹಾಗೂ ಸಂಗಡಿಗರು ಭಜನೆ ಹಾಡಿದರು.