ದೋಹಾ-ಕತಾರ್: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 151ನೇ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ದೋಹಾ ಕತಾರ್ನಲ್ಲಿನ ಭಾರತೀಯ ರಾಯಭಾರ ಕಚೇರಿಯಲ್ಲಿ ಗಾಂಧಿ ಜಯಂತಿಯನ್ನು ವಿಶೇಷವಾಗಿ ಆಚರಿಸಲಾಯಿತು.
ಕತಾರ್ನಲ್ಲಿರುವ ಭಾರತದ ರಾಯಭಾರಿ ಡಾ.ದೀಪಕ್ ಮಿತ್ತಲ್ ಅವರು ಗಾಂಧೀಜಿ ಅವರ ಪ್ರತಿಮೆಗೆ ಪುಷ್ಪಾರ್ಪಣೆ ಮಾಡುವ ಮೂಲಕ ನಮನ ಸಲ್ಲಿಸಿದರು. ಅಲ್ಲದೆ ರಾಯಭಾರ ಕಚೇರಿಯ ಪರಿಸರದಲ್ಲಿ ಗಿಡ ನೆಡುವ ಮೂಲಕ ಗಾಂಧಿ ಜಯಂತಿಯನ್ನು ಸ್ಮರಣೀಯಗೊಳಿಸಲಾಯಿತು.
ಕೋವಿಡ್ ಪಿಡುಗಿನ ಈ ಸಂದರ್ಭದಲ್ಲಿ ಗಾಂಧೀಜಿ ಅವರ ಆದರ್ಶ ಹಾಗೂ ತತ್ವಗಳ ಮಹತ್ವ ಹಾಗೂ ಪ್ರಸ್ತುತತೆಯನ್ನು ಅವರು ಪ್ರಸ್ತಾಪಿಸಿದರು. ಇಲ್ಲಿನ ಇಂಡಿಯನ್ ಕಲ್ಚರಲ್ ಸೆಂಟರ್ನಲ್ಲಿ ಭಜನ್ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೆರವೇರಿಸಲಾಯಿತು. ಕೊನೆಯಲ್ಲಿ ಗಾಂಧೀಜಿಯವರ ಸಂದೇಶಗಳನ್ನು ಒಳಗೊಂಡ ವಿಶೇಷವಾದ ವಿಡಿಯೋವೊಂದನ್ನು ಪ್ರದರ್ಶಿಸುವ ಮೂಲಕ ಕಾರ್ಯಕ್ರಮ ಸಮಾಪ್ತಿಗೊಂಡಿತು.