ಅಧಿಕಾರಿಗಳು, ಸದಸ್ಯರ ಗೈರಿನಲ್ಲೇ ಗಾಂಧಿ, ಶಾಸ್ತ್ರಿ ಜಯಂತಿ

Oplus_16908288
ಸನ್ಮಾನ ಬೇಡ ಕಾಯಂಗೊಳಿಸಿ ಎಂದು ಸಿದ್ದಾಪುರ ಗ್ರಾಮ ಪಂಚಾಯಿತಿ ಆಡಳಿತ ಮಂಡಳಿ ವಿರುದ್ಧ ವಾಗ್ವಾದ ನಡೆಸುತ್ತಿರುವ ಪೌರಕಾರ್ಮಿಕರು.
Published on

ಸಿದ್ದಾಪುರ: ಮಹಾತ್ಮ ಗಾಂಧೀಜಿ ಅವರ 156ನೇ ಹಾಗೂ ಲಾಲ್ ಬಹಾದೂರ್ ಶಾಸ್ತ್ರಿ ಅವರ 121ನೇ ಜನ್ಮ ದಿನಾಚರಣೆಯನ್ನು ಸಿದ್ದಾಪುರ ಗ್ರಾಮ ಪಂಚಾಯಿತಿಯಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಗ್ರಾ.ಪಂ. ಅಧ್ಯಕ್ಷೆ ಪ್ರೇಮಾ ಗೋಪಾಲ, ಉಪಾಧ್ಯಕ್ಷ ಪಳನಿ ಸ್ವಾಮಿ ಅವರು ಮಹಾತ್ಮರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಗ್ರಾಪಂ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಅಧಿಕಾರಿಗಳು, ಬಹುತೇಕ ಸದಸ್ಯರ ಗೈರು ಹಾಜರಿಯಲ್ಲಿ ಕಾರ್ಯಕ್ರಮ ನಡೆಯಿತು. ಸನ್ಮಾನ ಬೇಡ ಕಾಯಂಗೊಳಿಸಿ: ಗಾಂಧಿ ಜಯಂತಿ ಪ್ರಯುಕ್ತ ಗ್ರಾಮ ಪಂಚಾಯಿತಿ ಆಡಳಿತ ಮಂಡಳಿ ಇಲ್ಲಿನ ಪೌರ ಕಾರ್ಮಿಕರನ್ನು ಸನ್ಮಾನಿಸುವ ತೀರ್ಮಾನ ಕೈಗೊಂಡಿತ್ತು. ಆದರೆ ಸೇವಾ ಭದ್ರತೆ ಇಲ್ಲದೆ ಪರಿತಪಿಸುತ್ತಿರುವ ಪೌರ ಕಾರ್ಮಿಕರು ನಮಗೆ ಸನ್ಮಾನ ಬೇಡ ಸರ್ಕಾರಿ ನೌಕರರು ಎಂದು ಕಾಯಂಗೊಳಿಸಿ ಎಂದು ಪಟ್ಟು ಹಿಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಪೌರಕಾರ್ಮಿಕ ಸುರೇಶ್, ವೈದ್ಯಕೀಯ ಸೌಲಭ್ಯ, ಪಿ.ಎಫ್, ಕ್ಟಾಟ್ರಸ್ ಸೇರಿದಂತೆ ಸರ್ಕಾರಿ ಸೌಲಭ್ಯ ಇಲ್ಲದೆ ದಿನಗೂಲಿ ನೌಕರರಾಗಿ ದುಡಿಯುತ್ತಿದ್ದು, ನಮ್ಮನ್ನು ಗ್ರಾಮ ಪಂಚಾಯಿತಿ ನೌಕರರಾಗಿ ಗುರುತಿಸಿ ಎಂದು ಅಧ್ಯಕ್ಷೆ ಮತ್ತು ಉಪಾಧ್ಯಕ್ಷರ ಸಮ್ಮುಖದಲ್ಲಿ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಕೆಲಕಾಲ ಪೌರಕಾರ್ಮಿಕರು ಮತ್ತು ಆಡಳಿತ ಮಂಡಳಿ ನಡುವೆ ಮಾತಿನ ಚಕಮಕಿ ನಡೆಯಿತು. ನಂತರ ಸದಸ್ಯ ಶುಕ್ಕೂರ್ ಪೌರಕಾರ್ಮಿಕ ಬೇಡಿಕೆಗಳನ್ನು ಮುಂದಿನ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ ಮೇರೆಗೆ ಪೌರ ಕಾರ್ಮಿಕೆ ಕೋಕಿಲಾ ಹೊರತುಪಡಿಸಿ ಉಳಿದ ಪೌರಕಾರ್ಮಿಕರನ್ನು ಸನ್ಮಾನಿಸಲಾಯಿತು. ಗ್ರಾಮ ಪಂಚಾಯಿತಿ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಸುಬ್ರಮಣಿ, ಸಿಬ್ಬಂದಿ ಸವಿತಾ, ರಜಿನಿ, ಆಟೋ ಚಾಲಕರಾದ ಇಕ್ಬಾಲ್, ಮುಸ್ತಫಾ, ಗ್ರಾಮ ಪಂಚಾಯಿತಿ ಸದಸ್ಯೆ ದೇವಜಾನು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net