ಗಾಂಧೀಜಿ ಹಾಗೂ ಶಾಸ್ತ್ರೀಜಿ ಜಯಂತಿ ಆಚರಣೆ ಅ. 2ರಂದು

je721538035802367-abc
Published on

ಹಾವೇರಿ: ಜಿಲ್ಲಾಡಳಿತ, ಜಿಪಂ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರಸಭೆ, ಶಾಲಾ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಅ. 2ರಂದು ಬೆಳಗ್ಗೆ 10 ಗಂಟೆಗೆ ನಗರದ ಜಿಲ್ಲಾ ಗುರುಭವನದಲ್ಲಿ ಮಹಾತ್ಮಾಗಾಂಧಿ ಜಯಂತಿ ಹಾಗೂ ಲಾಲಬಹದ್ದೂರ ಶಾಸ್ತ್ರೀ ಜಯಂತಿ ಕಾರ್ಯಕ್ರಮ ಜರುಗಲಿದೆ.
ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಬೆಳಗ್ಗೆ 9 ಗಂಟೆಗೆ ನಗರದ ಗಾಂಧಿ ವೃತ್ತದಲ್ಲಿರುವ ಗಾಂಧಿ ಪುತ್ಥಳಿಗೆ ಮಾಲಾರ್ಪಣೆ, 9-15ಕ್ಕೆ ಗಾಂಧಿ ವೃತ್ತದಿಂದ ಗುರುಭವನದವರೆಗೆ ಸದ್ಭಾವನಾ ನಡಿಗೆ ಕಾರ್ಯಕ್ರಮ, ಬೆಳಗ್ಗೆ 10 ಗಂಟೆಗೆ ಗುರುಭವನದಲ್ಲಿ ಉದ್ಘಾಟನಾ ಸಮಾರಂಭ ಜರುಗಲಿದೆ.
ಜಿಲ್ಲಾ ಉಸ್ತುವಾರಿ ಸಚಿವರಾದ ಶಿವಾನಂದ ಪಾಟೀಲ ಉದ್ಘಾಟನೆ ನೆರವೇರಿಸುವರು. ವಿಧಾನಸಭೆ ಉಪಾಧ್ಯಕ್ಷ ರುದ್ರಪ್ಪ ಲಮಾಣಿ ಅಧ್ಯಕ್ಷತೆ ವಹಿಸುವರು. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್, ಸಂಸದ ಶಿವಕುಮಾರ ಉದಾಸಿ ಮತ್ತಿತರರು ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net