ಗಣೇಶ ಹಬ್ಬ; ಯಾವ ಧರ್ಮದವರಿಗೂ ತೊಂದರೆಯಾಗಬಾರದೆಂದು ಸಿದ್ದರಾಮಯ್ಯ ಎಚ್ಚರಿಕೆ

ganesha
Published on

ಬೆಂಗಳೂರು: ಅಧಿಕಾರಿಗಳಿಗೆ ಮುಖ್ಯಮಂತ್ರಿಯವರು ಸಭೆಯಲ್ಲಿ‌ ಅನೇಕ‌ ಸೂಚನೆ ನೀಡಿದ್ದು, ಗಣೇಶ ಹಬ್ಬ ಬಂಧವೂ ಮಹತ್ವದ ನಿರ್ದೇಶನ‌ ನೀಡಿದ್ದಾರೆ.

ಗಣೇಶ ಹಬ್ಬದ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಬೇಕು. ಪರಿಸರ ಹಾನಿಯಾಗದಂತೆ ಹಬ್ಬ ಆಚರಿಸಲು ಕ್ರಮ ಕೈಗೊಳ್ಳಲು ಸೂಚಿಸಲಾಯಿತು. ಜತೆಗೆ ಕೋಮುಶಕ್ತಿಗಳು ಕಾನೂನು ಸುವ್ಯವಸ್ಥೆ ಹಾಳು ಮಾಡದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು, ಯಾವ ಧರ್ಮದವರಿಗೂ ತೊಂದರೆಯಾಗಬಾರದು ಎಂದು ತಾಕೀತು ಮಾಡಿದರು.

ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಮೂರು ಜಿಲ್ಲೆಗಳಲ್ಲಿ ಕಲುಷಿತ ನೀರು ಸೇವನೆಯಿಂದ ಮೃತಪಟ್ಟಿದ್ದಾರೆ, ಅಸ್ವಸ್ಥರಾಗಿದ್ದಾರೆ. ಚಿತ್ರದುರ್ಗದಲ್ಲಿ ಕಲುಷಿತ ನೀರು ಕುಡಿದು ಆರು ಜನ ಸತ್ತಿದ್ದಾರೆ. ಇಂತಹ ಘಟನೆಗಳು ಮರುಕಳಿಸಬಾರದು ಎಂದು ಇದೇ ವೇಳೆ ತಿಳಿಸಿದ್ದಾರೆ.

ಇತ್ತೀಚೆಗೆ ಡೆಂಘಿ ಜ್ವರ ಜಾಸ್ತಿ ಆಗಿದೆ. ವಿಶೇಷವಾಗಿ ಬಿಬಿಎಂಪಿ ವ್ಯಾಪ್ತಿಯಲ್ಲಿ 4000ಕ್ಕೂ ಹೆಚ್ಚು ಪ್ರಕರಣಗಳು ಕಂಡು ಬಂದಿವೆ. ಈ ಸಾಂಕ್ರಾಮಿಕ ತಡೆಗಟ್ಟಲು ಒತ್ತು ನೀಡಬೇಕು ಎಂದು ಸಲಹೆ ನೀಡಿದರು.

ಮತ್ತೆ ಜಾನುವಾರುಗಳಿಗೆ ಚರ್ಮಗಂಟು ರೋಗ ಕಾಣಿಸಿಕೊಳ್ಳುತ್ತಿದ್ದು, ಕೂಡಲೇ ಲಸಿಕೆ ಹಾಕುವ ಕೆಲಸ ಪ್ರಾರಂಭ ಮಾಡಬೇಕು. ಕಾಲುಬಾಯಿ ಜ್ವರ ರೋಗಕ್ಕೂ ಲಸಿಕೆ ಹಾಕಬೇಕು ಎಂದು ಸೂಚಿಸಿದ್ದು, ಗೊಬ್ಬರವನ್ನು ಎಂ.ಆರ್.ಪಿ ದರಕ್ಕಿಂತ ಹೆಚ್ಚು ದರಕ್ಕೆ ಮಾರಾಟ ಮಾಡುವುದಕ್ಕೆ ಕಡಿವಾಣ ಹಾಕಬೇಕು ಎಂದು ತಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net