

ಹಾವೇರಿ: ಗಣೇಶ ಚತುಥಿರ್ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ವಾ.ಕ.ರ.ಸಾ.ಸಂಸ್ಥೆಯ ವ್ಯಾಪ್ತಿಯ ಹುಬ್ಬಳ್ಳಿ, ಧಾರವಾಡ, ಗದಗ, ಬೆಳಗಾವಿ, ಉತ್ತರ ಕನ್ನಡ, ಹಾವೇರಿ, ಚಿಕ್ಕೋಡಿ ಮತ್ತು ಬಾಗಲಕೋಟೆ ವಿಭಾಗಗಳಿಂದ ಸುಮಾರು 220 ಹೆಚ್ಚುವರಿ ವಿಶೇಷ ಬಸ್ಗಳು ಓಡಾಡಲಿವೆ.
ಸೆ. 6 ಹಾಗೂ 7ರಂದು ಸ್ವರ್ಣಗೌರಿ ಹಾಗೂ ಗಣೇಶ ಚತುಥಿರ್ ಹಬ್ಬವಿರುವುದರಿಂದ ಬೆಂಗಳೂರು ಮತ್ತು ಇತರ ಪ್ರಮುಖ ಸ್ಥಳಗಳಿಂದ ಹೆಚ್ಚಿನ ಪ್ರಯಾಣಿಕರು ತಮ್ಮ ತಮ್ಮ ಊರುಗಳಿಗೆ ತೆರಳಲು ಹೆಚ್ಚುವರಿ ಸಾರಿಗೆಗಳನ್ನು ಕಾರ್ಯಾಚರಣೆ ಮಾಡಲಾಗುವುದು.
ಬೆಂಗಳೂರಿನಿಂದ ರಾಜ್ಯ, ಅಂತಾರಾಜ್ಯದ ವಿವಿಧ ಸ್ಥಳಗಳಿಗೆ ತೆರಳಲು ಸೆ. 5ರ ಸಂಜೆ ಹಾಗೂ ಸೆ. 6ರ ಹೆಚ್ಚುವರಿ ವಿಶೇಷ ಸಾರಿಗೆ ಸೌಲಭ್ಯವನ್ನು ಕಲ್ಪಿಸಲಾಗಿದೆ. ಹಬ್ಬ ಮುಗಿದ ಮೇಲೆ ಸೆ. 8 ಹಾಗೂ 9ರಂದು ಪ್ರಮುಖ ಸ್ಥಳಗಳಿಂದ ಜನದಟ್ಟಣೆಗೆ ಅನುಗುಣವಾಗಿ ಹೆಚ್ಚುವರಿ ಸಾರಿಗೆಗಳನ್ನು ಕಾರ್ಯಾಚರಣೆಗೊಳಿಸಲಾಗುತ್ತಿದೆ ಎಂದು ಸಾರಿಗೆ ಸಂಸ್ಥೆ ಪ್ರಕಟಣೆ ತಿಳಿಸಿದೆ.