ಗಣೇಶೋತ್ಸವ ನಿಮಿತ್ತ ಉಚಿತ ಆರೋಗ್ಯ ತಪಾಸಣೆ ಶಿಬಿರ ಸೆ. 30ರಂದು

je721538035802367-abc
Published on

ರಾಣೆಬೆನ್ನೂರ: ತಾಲೂಕಿನ ಮೇಡ್ಲೇರಿ ಗ್ರಾಮದ ಶ್ರೀ ಗಜಾನನ ಯುವಕ ಮಂಡಳಿಯ 25ನೇ ವರ್ಷದ ಗಣೇಶೋತ್ಸವ ನಿಮಿತ್ತ ಗ್ರಾಪಂ, ಎಪಿಎಂಸಿ ಮಾಜಿ ಸದಸ್ಯ ಬಸವರಾಜ ಹುಲ್ಲತ್ತಿ ಅವರ ಸಹಯೋಗದಲ್ಲಿ ಸೆ. 30ರಂದು ಬೆಳಗ್ಗೆ 9ರಿಂದ ಮಧ್ಯಾಹ್ನ 3ರ ವರೆಗೆ ಗ್ರಾಮದ ಮಾರುತಿ ಮಂಟಪದಲ್ಲಿ ಉಚಿತ ಆರೋಗ್ಯ ತಪಾಸಣೆ ಹಮ್ಮಿಕೊಳ್ಳಲಾಗಿದೆ.
ಜನರಲ್ ಮೆಡಿಸನ್, ಶ್ವಾಸಕೋಶ ಸಂಬಂಧಿ ರೋಗಗಳು, ಚರ್ಮ ರೋಗ ಚಿಕಿತ್ಸೆ, ಸ್ತ್ರೀ ರೋಗ, ಕಿವಿ-ಮೂಗು-ಗಂಟಲು ಚಿಕಿತ್ಸೆ, ಮಕ್ಕಳ ಚಿಕಿತ್ಸೆ, ನೇತ್ರ ಚಿಕಿತ್ಸೆ, ಹೃದಯ ರೋಗ, ಎಲುಬು ಮತ್ತು ಕೀಲು ಚಿಕಿತ್ಸೆ ಸೇರಿ ಎಲ್ಲ ರೀತಿಯ ತೊಂದರೆಗಳಿಗೆ ಉಚಿತವಾಗಿ ಚಿಕಿತ್ಸೆ ಹಾಗೂ ಶಸ್ತ್ರ ಚಿಕಿತ್ಸೆ ಮಾಡಲಾಗುವುದು.
ಆದ್ದರಿಂದ ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಎಪಿಎಂಸಿ ಮಾಜಿ ಸದಸ್ಯ ಬಸವರಾಜ ಹುಲ್ಲತ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net