ಬೆಂಗಳೂರಿನಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ; ಯುವತಿ ಮೇಲೆ ಗ್ಯಾಂಗ್ ರೇಪ್​

Gang Rape
Published on

ಬೆಂಗಳೂರು: ಕೇರಳ ಮೂಲದ ಮಹಿಳೆಯ ಮೇಲೆ ಇಬ್ಬರು ಯುವಕರು ಗ್ಯಾಂಗ್ ರೇಪ್ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕಳೆದ ಗುರುವಾರ ಎಲೆಕ್ಟ್ರಾನಿಕ್ ಸಿಟಿ ನಿಲಾದ್ರಿ ನಗರದ ಬಳಿ ಯುವಕರಿಂದ ಮಹಿಳೆಯ ಮೇಲೆ ಪೈಶಾಚಿಕ ಕೃತ್ಯ ನಡೆದಿದ್ದು, ನ್ಯಾಯಕ್ಕಾಗಿ ಯುವತಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳೆ.

ಬಿಟಿಎಂ ಲೇಔಟ್​​ನ ಸಂಸ್ಥೆಯೊಂದರಲ್ಲಿ ಫ್ರೀಲ್ಯಾನ್ಸರ್ ಆಗಿ ಕೆಲಸ ಮಾಡುತ್ತಿದ್ದ ಕೇರಳ ಮೂಲದ ಯುವತಿ, ಗುರುವಾರ ರಾತ್ರಿ ರ‍್ಯಾಪಿಡೋ ಬೈಕ್ ಬುಕ್ಕಿಂಗ್ ಮಾಡಿದ್ದಳು. ರ‍್ಯಾಪಿಡೋ ಬೈಕ್ ಹುಡುಗ ಮಹಿಳೆಯನ್ನು ಪಿಕ್ ಅಪ್ ಮಾಡುವ ವೇಳೆ ಯುವತಿ ಮದ್ಯಪಾನ ಮಾಡಿದ್ದಳು. ಹೀಗಾಗಿ ನೀಲಾದ್ರಿ ನಗರಕ್ಕೆ ತಲುಪುವ ಹೊತ್ತಿಗೆ ಯುವತಿ ಅರೆ ಪ್ರಜ್ಞಾವಸ್ಥೆಯಲ್ಲಿದ್ದಳು.

ಯುವತಿ ಅರೆ ಪ್ರಜ್ಞಾವಸ್ಥೆಯಲ್ಲಿರುವ ವಿಷಯವನ್ನು ಬೈಕ್ ಚಾಲಕ ತನ್ನ ಸ್ನೇಹಿತನಿಗೆ ತಿಳಿಸಿದ್ದಾನೆ. ನಂತರ ಸ್ನೇಹಿತನ ನೆರವಿನಿಂದ ಆಕೆಯನ್ನು ನಿಶ್ಚಿತ ಜಾಗಕ್ಕೆ ತಲುಪಿಸದೆ, ತನ್ನ ರೂಮಿಗೆ ಕರೆದುಕೊಂಡು ಹೋಗಿದ್ದಾನೆ. ಅಲ್ಲಿ ಇಬ್ಬರು ಯುವಕರು ಸೇರಿಕೊಂಡು ಅತ್ಯಾಚಾರ ಮಾಡಿದ್ದಾರೆ.

ಪಾನಮತ್ತಳಾಗಿ ಅರೆ ಪ್ರಜ್ಞಾವಸ್ಥೆಯಲ್ಲಿದ್ದ ಯುವತಿಯನ್ನು, ಪ್ರಜ್ಞೆ ಬಂದ ಬಳಿಕ ಯುವಕರು ಬಿಟ್ಟು ಕಳುಹಿಸಿದ್ದಾರೆ. ನಂತರ ಈ ವಿಷಯವನ್ನುಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದಾರೆ.

ಈ ಘಟನೆ ಸಂಬಂಧ ಯುವತಿ ಸದ್ಯ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ಎಲೆಕ್ಟ್ರಾನಿಕ್ ಸಿಟಿ ಪೊಲೀಸರಿಗೆ ದೂರು ನೀಡಿದ್ದಾಳೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ದೂರು ಆಧರಿಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net