

ಬೆಟ್ಟದಪುರ: ಆವರ್ತಿ ಗ್ರಾಮದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಹಾರನಹಳ್ಳಿ ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಬಾಲಕರ ಮತ್ತು ಬಾಲಕಿಯರ ವಿಭಾಗದಲ್ಲಿ ಬೆಟ್ಟದಪುರ ಸಮೀಪದ ಗಂಗನಕುಪ್ಪೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ.
ವಾಲಿಬಾಲ್ ಪಂದ್ಯದಲ್ಲಿ ಪ್ರಥಮ ಸ್ಥಾನ, 4/100 ರಿಲೇಯಲ್ಲಿ (ದ್ವಿ), ಎತ್ತರ ಜಿಗಿತ ಸ್ಪರ್ಧೆಯಲ್ಲಿ ವಿನೇಶ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾದರು. ಈ ಹಿನ್ನೆಲೆಯಲ್ಲಿ ಗುರುವಾರ ಶಾಲಾಭಿವೃದ್ಧಿ ಸಮಿತಿ ಮತ್ತು ಶಿಕ್ಷಕರು ಕ್ರೀಡಾಪಟುಗಳಿಗೆ ಅಭಿನಂದನೆ ಸಲ್ಲಿಸಿದರು.
ಎಸ್‌ಡಿಎಂಸಿ ಅಧ್ಯಕ್ಷೆ ಲತಾಕುಮಾರ್, ಮುಖಂಡ ಕೆಂಪೇಗೌಡ, ಮುಖ್ಯಶಿಕ್ಷಕ ಅಶೋಕ್, ಶಿಕ್ಷಕರಾದ ಲಕ್ಷ್ಮಣ್, ಸುನೀತಾ, ಆಶಾರಾಣಿ, ಅಂಗನವಾಡಿ ಕಾರ್ಯಕರ್ತೆ ಜಯಂತಿ ಹಾಗೂ ವಿದ್ಯಾರ್ಥಿಗಳು ಇದ್ದರು.