ರಾಜ್ಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯು ದೇಶದಲ್ಲೇ 3ನೇ ಸ್ಥಾನ 2ನೇ ರಾಜ್ಯ ಗಣಿಗಾರಿಕೆ ಮಂತ್ರಿಗಳ ಸಮ್ಮೇಳನದಲ್ಲಿ ಕೇಂದ್ರದ ಶ್ಲಾಘನೆ

gani1
Published on

ಭೋಪಾಲ್:
ರಾಜ್ಯದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯು ದೇಶದಲ್ಲೇ ಮೂರನೇ ಸ್ಥಾನ ಪಡೆದುಕೊಂಡಿದ್ದು, ಮುಂದಿನ ದಿನಗಳಲ್ಲಿ ಇನ್ನು ಉತ್ತಮ ಸಾಧನೆ ಮಾಡುವುದಾಗಿ ಗಣಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರು ಹೇಳಿದ್ದಾರೆ.
2 ನೇ ರಾಜ್ಯ ಗಣಿಗಾರಿಕೆ ಮಂತ್ರಿಗಳ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕರ್ನಾಟಕ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯು 2022-23 ನೇ ಸಾಲಿನ ಖನಿಜ ಬ್ಲಾಕಗಳ ಹರಾಜಿನಲ್ಲಿ 3 ನೇ ಬಹುಮಾನ ಪಡೆದುಕೊಂಡು ಉತ್ತಮ ಸಾಧನೆಯನ್ನು ಮಾಡಿದೆ ಎಂದರು.
ಕೇಂದ್ರ ಸರ್ಕಾರದಿಂದ ಶ್ಲಾಘನೆ ದೊರೆತಿದೆ. ಮುಂದಿನ ದಿನಗಳಲ್ಲಿ ಇನ್ನೂ ಉತ್ತಮ ಸಾಧನೆ ತೋರಿಸುವುದಾಗಿ ಹೇಳಿದ್ದಾರೆ.
ಕಾರ್ಯಕ್ರಮದಲ್ಲಿ ಸಂಸದೀಯ ವ್ಯವಹಾರಗಳ ಗಣಿ ಮತ್ತು ಕಲ್ಲಿದ್ದಲು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ನಿರ್ದೇಶಕ ಗಿರೀಶ್, ಕೇಂದ್ರದ ಹಿರಿಯ ಅಧಿಕಾರಿಗಳು ಹಾಗೂ ಮಧ್ಯಪ್ರದೇಶದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net