2.32 ಕೆ.ಜಿ ಗಾಂಜಾ ಪತ್ತೆ

ganja
Published on

ಮಂಗಳೂರು: ಬಲ್ಮಠದಲ್ಲಿ ಮಾರಾಟಕ್ಕೆ ತಂದಿದ್ದ 2.32 ಕೆ.ಜಿ ಗಾಂಜಾವನ್ನು ಆರ್ಥಿಕ ಮತ್ತು ಮಾದಕ ದ್ರವ್ಯ ಅಪರಾಧ ಠಾಣೆ ಪೊಲೀಸರು ಬುಧವಾರ ಸಾಯಂಕಾಲ ಪತ್ತೆ ಮಾಡಿ ಓರ್ವನನ್ನು ಬಂಧಿಸಿದ್ದಾರೆ.

ಅಪರಿಚಿತ ವ್ಯಕ್ತಿ ಸ್ಕೂಲ್ ಬ್ಯಾಗ್ ಹಾಕಿಕೊಂಡು ನಶೆಯಲ್ಲಿದ್ದಂತೆ ಕಂಡು ಬಂದಿದ್ದು, ಆತನನ್ನು ಪತ್ತೆ ಮಾಡಿ ವಿಚಾರಣೆಗೊಳಪಡಿಸಿದಾಗ ಗಾಂಜಾ ಪತ್ತೆಯಾಗಿದೆ. ಜತೆಗೆ 1 ಮೊಬೈಲ್ ಹಾಗೂ 130 ರೂ. ವಶಕ್ಕೆ ಪಡೆಯಲಾಗಿದೆ. ಪಿಎಸ್‌ಐ ಸತೀಶ್ ಸಿಬ್ಬಂದಿಯೊಂದಿಗೆ ಕಾರ್ಯಾಚರಣೆ ನಡೆಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net