ಸಂಭ್ರಮ ಸಡಗರದಿಂದ ಜರುಗಿದ ಗಣಪತಿ ಶೋಭಾಯಾತ್ರೆ

oplus_0
oplus_0
Published on

ರಾಣೆಬೆನ್ನೂರ: ನಗರದ ಸಂಗಮ್​ ವೃತ್ತದಲ್ಲಿ ವಿಶ್ವ ಹಿಂದು ಪರಿಷತ್​, ಭಜರಂಗದಳದ ವತಿಯಿಂದ ಪ್ರತಿಷ್ಠಾಪಿಸಲಾಗಿದ್ದ ಗಣೇಶನ ಮೂತಿರ್ ಶೋಭಾಯಾತ್ರೆ ನಗರದಲ್ಲಿ ಸಂಭ್ರಮ ಸಡಗರದಿಂದ ಜರುಗಿತು.

ಸಂಗಮ್​ ವೃತ್ತದಿಂದ ಆರಂಭಗೊಂಡ ಶೋಭಾಯಾತ್ರೆಯು ರಂಗನಾಥ ನಗರ, ಸುಣಗಾರ ಓಣಿ, ಕುಂಬಾರ ಓಣಿ, ದೊಡ್ಡಪೇಟೆ, ಚಕ್ಕಿ ಮಿಕ್ಕಿ ಸರ್ಕಲ್​, ಎಂ.ಜಿ. ರಸ್ತೆ, ದುರ್ಗಾ ಸರ್ಕಲ್​, ಕುರುಬಗೇರಿ ಕ್ರಾಸ್​ ಸೇರಿ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ಮೆರವಣಿಗೆಯುದ್ದಕ್ಕೂ ಯುವಜನರು ಡಿಜೆ ಹಾಡಿಗೆ ಕುಣಿದು ಕುಪ್ಪಳಿಸಿದರು.

ಶೋಭಾಯಾತ್ರೆ ಮೆರವಣಿಗೆ ಸಾಗಿಬರುವ ದಾರಿಯುದ್ದಕ್ಕೂ ಸಾರ್ವಜನಿಕರಿಗೆ ಉಪಹಾರ, ಕುಡಿಯುವ ನೀರು ವಿತರಿಸಲಾಯಿತು. ವಿವಿಧ ಬಗೆಯ ಗೊಂಬೆಗಳು, ಸಮಾಳ, ಹಲಗೆ ಹಾಗೂ ಯುವಕ, ಯುವತಿಯರಿಗೆ ಪ್ರತ್ಯೇಕ ಡಿಜೆ ಸಂಗೀತ ಮೆರವಣಿಗೆಯ ವಿಶೇಷ ಆಕರ್ಷಣೆಯಾಗಿದ್ದವು. ಸಾವಿರಾರು ಜನರು ಸಂಗೀತಕ್ಕೆ ತಕ್ಕಂತೆ ನೃತ್ಯ ಮಾಡಿ ಜನಮನ ಸೂರೆಗೊಂಡರು. ಯಾವುದೇ ಅಹಿತಕರ ಟನೆ ಸಂಭವಿಸದಂತೆ ಪೊಲೀಸರು ಬಿಗಿ ಬಂದೋಬಸ್ತ್​ ಒದಗಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net