ಗರಡಿ ಚಲನಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭಕ್ಕೆ ಸಕಲ ಸಿದ್ಧತೆ

31-RNR-05
Published on

ರಾಣೆಬೆನ್ನೂರ: ಕೌರವ ಪ್ರೊಡಕ್ಷನ್ ಹೌಸ್ ವತಿಯಿಂದ ನಿರ್ಮಾಣಗೊಂಡಿರುವ ಗರಡಿ ಚಲನಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ನ. 1ರಂದು ಸಂಜೆ 6.30ಕ್ಕೆ ನಗರದ ಮುನ್ಸಿಪಲ್ ಮೈದಾನದಲ್ಲಿ ಜರುಗಲಿದ್ದು, ಅದಕ್ಕಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಗರಡಿ ಸಿನಿಮಾದ ಟ್ರೇಲರ್ ಬಿಡುಗಡೆ ಸಮಾರಂಭ ಹಾಗೂ ಸಂಗೀತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಸಮಾರಂಭಕ್ಕಾಗಿ ವಿಶೇಷ ವಿದ್ಯುತ್ ದೀಪಗಳ ಅಲಂಕಾರವುಳ್ಳ ವೇದಿಕೆ ಸಿದ್ಧಪಡಿಸಲಾಗಿದೆ. ಕಾರ್ಯಕ್ರಮ ವೀಕ್ಷಣೆಗೆ ಬರುವವರಿಗೆ ಸಾವಿರಾರು ಆಸನದ ವ್ಯವಸ್ಥೆ ಮಾಡಲಾಗಿದೆ. ಗಣ್ಯರಿಗೆ ಹಾಗೂ ಅತಿ ಅಣ್ಯರಿಗೆ ಪ್ರತ್ಯೇಕ ಆಸನದ ವ್ಯವಸ್ಥೆ ಮಾಡಲಾಗಿದೆ.
ಮಾಜಿ ಸಚಿವ ಹಾಗೂ ನಟ ಬಿ.ಸಿ. ಪಾಟೀಲ, ಚಲನಚಿತ್ರದ ನಟ ಯಶಸ್ವಿ ಸೂರ್ಯ, ನಾಯಕಿ ಸಾಹೀಲ, ನಿರ್ದೇಶಕ ಯೋಗರಾಜ್ ಭಟ್, ನಿರ್ಮಾಪಕಿ ಸೃಷ್ಟಿ ಪಾಟೀಲ, ಮಾಜಿ ಶಾಸಕ ಅರುಣಕುಮಾರ ಪೂಜಾರ ಮತ್ತಿತರರು ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net